ಶ್ರೀನಗರ:
ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿಯಾಗಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಉಗ್ರರ ಬೇಟೆ ಮುಂದುವರಿದಿದ್ದು, ಗಡಿಯಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಜ್ಜಾಗಿದ್ದ ಹಿಜ್ಬುಲ್ ಮುಜಾಹಿದ್ದೀನ್ (ಎಚ್‍ಎಂ) ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಸೇನೆ ಹೊಡೆದುರುಳಿಸಿದೆ.
ಉಗ್ರರ ಪೈಕಿ ಓರ್ವನನ್ನು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಶೌಕತ್ ಅಹ್ಮದ್ ದಾರ್ ಎಂದು ಗುರುತಿಸಲಾಗಿದೆ. ಮೃತ ಉಗ್ರರಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಪುಲ್ವಾಮಾದಲ್ಲಿ ಉಗ್ರರ ದಾಳಿಯ ಬಳಿಕ ಭಾರತೀಯ ಸೇನೆ ಉಗ್ರಗಾಮಿಗಳನ್ನು ವ್ಯವಸ್ಥಿತವಾಗಿ ಮಟ್ಟ ಹಾಕುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
