ಬಸ್ಸು – ಲಾರಿ ಡಿಕ್ಕಿ : 20 ಮಂದಿ ಸಜೀವ ದಹನ!!

ಕನ್ನೌಜ್:

     ಲಾರಿ ಮತ್ತು ಬಸ್ ಡಿಕ್ಕಿಯಾದ ರಭಸಕ್ಕೆ ಬೆಂಕಿ ಕಾಣಿಸಿಕೊಂಡು ವಾಹನಗಳು ಹೊತ್ತಿ ಉರಿದ ಪರಿಣಾಮ  20ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿರುವ ಪ್ರದೇಶದ ಕನೌಜ್ ಜಿಲ್ಲೆಯಲ್ಲಿ ನಡೆದಿದೆ.

      ಬಸ್ಸಿನಲ್ಲಿ ಸುಮಾರು 50 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಬಸ್ಸು ದೆಹಲಿ- ಕಾನ್ಪುರ ಹೆದ್ದಾರಿಯ ಜಿಟಿ ರೋಡ್ ಬಳಿ ಲಾರಿಗೆ ಢಿಕ್ಕಿ ಹೊಡೆದಾಗ ಈ ದುರಂತ ಸಂಭವಿಸಿದೆ.

      ಎರಡೂ ವಾಹನಗಳೂ ಸಂಪೂರ್ಣ ಭಸ್ಮವಾಗಿವೆ. ದುರಂತದಲ್ಲಿ ಸುಟ್ಟು ಕರಕಲಾದ ಕನಿಷ್ಠ 15 ಮಂದಿಯ ಗುರುತು ಪತ್ತೆ ಸಾಧ್ಯವಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ವಿವರಿಸಿದ್ದಾರೆ.  

      ಬಾಗಿಲು ಹಾಗೂ ಕಿಟಕಿಗಳನ್ನು ಮುಚ್ಚಿ ಜನ ನಿದ್ರೆ ಮಾಡುತ್ತಿದ್ದ ಕಾರಣ ದುರಂತ ಸಂಭವಿಸಿದಾಗ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ. ತೀವ್ರ ಸುಟ್ಟ ಗಾಯಗಳಾಗಿರುವ 21 ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

      ಇನ್ನು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆಧಿತ್ಯನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳ ಕುಟುಂಬಕ್ಕೆ 50 ಸಾವಿರ ರೂ. ಪರಿಹಾರವನ್ನು ರಾಜ್ಯ ಸರ್ಕಾರ ಘೋಷಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ