ಟ್ಯುನೇಷಿಯಾ :
ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಉರುಳಿ ಬಿದ್ದ ಪರಿಣಾಮ 22 ಮಂದಿ ಸಾವನ್ನಪ್ಪಿರುವ ದುರ್ಘಟನೆ ಟ್ಯುನೇಷಿಯಾದ ರಾಜಧಾನಿ ಸಮೀಪ ನಡೆದಿದೆ.
ರಾಜಧಾನಿ ಟುನಿಸ್ ನಿಂದ ಎನೌಸಿ ಪ್ರಾಂತ್ಯಕ್ಕೆ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು, ಪ್ರವಾಸಿ ಬಸ್ ಕಂದಕಕ್ಕೆ ಉರುಳಿದ ಪರಿಣಾಮ ಬಸ್ನಲ್ಲಿದ್ದ 43 ಪ್ರಯಾಣಿಕರ ಪೈಕಿ 22 ಮಂದಿ ಸಾವೀಗೀಡಾಗಿ, 21 ಮಂದಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ