ಪರಿಹಾರ ಸಾಮಗ್ರಿ ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನ : 3 ಸಾವು!!!

ಉತ್ತರಕಾಶಿ:

        ನೆರೆ ಸಂತ್ರಸ್ತರಿಗಾಗಿ ಪರಿಹಾರ ಸಾಮಗ್ರಿ ಹೊತ್ತು ಬರುತ್ತಿದ್ದ ಹೆಲಿಕಾಪ್ಟರ್ ಪತನವಾಗಿದ್ದು, ಮೂವರು ದುರ್ಮರಣಕ್ಕೀಡಾಗಿದ್ದಾರೆ.

      ಮೃತರನ್ನು ಪೈಲಟ್ ರಾಜ್ ಪಾಲ್, ಸಹ ಪೈಲಟ್ ಕಪ್ತಾಲ್ ಲಾಲ್ ಹಾಗೂ ಸ್ಥಳೀಯರಾದ ರಮೇಶ್ ಸವಾರ್ ಎಂದು ಗುರುತಿಸಲಾಗಿದೆ. ಈ ಘಟನೆ ಮಂಗಳವಾರ ಮಧ್ಯಾಹ್ನ ಉತ್ತರಾಖಂಡ್‍ನ ಉತ್ತರ ಕಾಶಿಯಲ್ಲಿ ನಡೆದಿದೆ.

      ಉತ್ತರ ಕಾಶಿ ಜಿಲ್ಲೆಯ ಮೊರಿಯಿಂದ ಮೊಲ್ದಿ ಕಡೆ ಹಾರುತ್ತಿದ್ದ ಹೆಲಿಕಾಪ್ಟರ್ ಪ್ರವಾಹ ಪೀಡಿತ ಪ್ರದೇಶಗಳ ಜನರಿಗೆ ಆಹಾರ ಸಾಮಾಗ್ರಿಗಳನ್ನು ಕೊಂಡೊಯ್ಯುತ್ತಿತ್ತು ಎಂದು ಅಲ್ಲಿನ ಜಿಲ್ಲಾ ಮ್ಯಾಜಿಸ್ಟ್ರೇಟರ್ ಮಾಹಿತಿ ನೀಡಿದ್ದಾರೆ.

      ಪತನವಾದ ಮಾಹಿತಿ ತಿಳಿಯುತ್ತಿದ್ದಂತೆಯೇ ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸರು(ಐಟಿಬಿಪಿ) ಘಟನಾ ಸ್ಥಳಕ್ಕೆ ದೌಡಾಯಿಸಿ, ಮೃತದೇಹಗಳನ್ನು ಪಡೆದುಕೊಂಡಿದ್ದಾರೆ.

       ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರು ಮೃತರ ಕುಟುಂಬಕ್ಕೆ 15 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link