ನೂತನವಾಗಿ ಉಗ್ರ ಸಂಘಟನೆಗೆ ಸೇರಿದ್ದ 3 ಉಗ್ರರ ಬಂಧನ!!

ಶ್ರೀನಗರ:

    ಇತ್ತೀಚೆಗಷ್ಟೇ ಉಗ್ರ ಸಂಘಟನೆಗೆ ಸೇರ್ಪಡೆಗೊಂಡಿದ್ದ ಮೂವರು ಮೂವರು ಉಗ್ರರನ್ನು ಬಂಧಿಸುವಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಯಶಸ್ವಿಯಾಗಿದ್ದಾರೆ.

     ಕುಲ್ವಾರ ಜಿಲ್ಲೆಯಲ್ಲಿ ಸೋಗಂ ಎಂಬಲ್ಲಿ ಗೌಪ್ಯವಾಗಿ ಉಗ್ರರು ಕಾರ್ಯನಿರ್ವಹಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸೇನೆಯೊಂದಿಗೆ ಜಂಟಿಯಾಗಿ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು.

      ಇದರಂತೆ ಇದೀಗ ಉಗ್ರ ಸಂಘಟನೆಗಳಿಗೆ ಇತ್ತೀಚೆಗಷ್ಟೇ ನೇಮಕಗೊಂಡಿದ್ದ ಮೂವರು ಉಗ್ರರನ್ನು ಬಂಧಿಸಿದ್ದಾರೆ. ಉಗ್ರರ ಕುರಿತು ಇನ್ನೂ ಮಾಹಿತಿಗಳು ಲಭ್ಯವಾಗಿಲ್ಲ, ತನಿಖೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap