ದೇಶದಲ್ಲಿ ಒಂದೇ ದಿನ ಕೊರೊನಾಗೆ 336 ಮಂದಿ ಬಲಿ!!

ನವದೆಹಲಿ: 

      ದೇಶದಲ್ಲಿ ಕಿಲ್ಲರ್ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ  13,586 ಹೊಸ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 336 ಮಂದಿ ಮೃತಪಟ್ಟಿದ್ದಾರೆ.

      ಶುಕ್ರವಾರ ಬೆಳಿಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಬುಲೆಟಿನ್ ಪ್ರಕಾರ,  ಒಂದೇ ದಿನ 380 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ದೇಶದಲ್ಲಿ ಇದುವರೆಗೆ 3,80,532  ಪ್ರಕರಣಗಳು ದಾಖಲಾಗಿದೆ.

      ಸಾವಿನ ಸಂಖ್ಯೆ ಕೂಡ 12,573 ಕ್ಕೆ ಏರಿಕೆಯಾಗಿದೆ. ಸದ್ಯ 1,63,248 ಪ್ರಕರಣಗಳು ಸಕ್ರಿಯವಾಗಿದ್ದು 2,04,710 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ