ನವದೆಹಲಿ:
ದೇಶದಲ್ಲಿ ಇಂದು ಹೊಸದಾಗಿ 37,148 ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 11,55,191ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 587 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ವೈರಸ್ ದೇಶದಲ್ಲಿ 28,084 ಮಂದಿಯನ್ನು ಬಲಿ ಪಡೆದುಕೊಂಡಿದೆ.
Spike of 37,148 cases and 587 deaths reported in India in the last 24 hours.
Total #COVID19 positive cases stand at 11,55,191 including 4,02,529 active cases, 7,24,578 cured/discharged/migrated and 28084 deaths: Ministry of Health and Family Welfare pic.twitter.com/iuKN63EYtV
— ANI (@ANI) July 21, 2020
11,55,191 ಮಂದಿ ಸೋಂಕಿತರ ಪೈಕಿ 7,24,578 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ದೇಶದಲ್ಲಿನ್ನು 4,02,529 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ