ರಾಯ್ಪುರ:
ಮಾವೋವಾದಿಗಳು ಮತ್ತು ಬಿಎಸ್ ಎಫ್ ಜವಾನರ ನಡುವೆ ನಡೆದ ಎನ್ ಕೌಂಟರ್ ದಾಳಿಯಲ್ಲಿ ನಾಲ್ವರು ಬಿಎಸ್ ಎಫ್ ಯೋಧರು ಹುತಾತ್ಮರಾಗಿದ್ದಾರೆ.
ಛತ್ತೀಸ್ ಗಢದ ಕಾಂಕೇರ್ ಜಿಲ್ಲೆಯ ಮಹಲ ಗ್ರಾಮದ ಬಳಿ ದಟ್ಟ ಅರಣ್ಯ ಪ್ರದೇಶದಲ್ಲಿ ಬಿಎಸ್ಎಫ್ನ 114ನೇ ಬೆಟಾಲಿಯನ್ನ ಯೋಧರು ಶೋಧ ಕಾರ್ಯ ನಡೆಸುತ್ತಿದ್ದರು.
#UPDATE : 4 BSF jawans have lost their lives in an encounter with Maoists in Kanker, Chhattisgarh https://t.co/zs8K25iF87
— ANI (@ANI) April 4, 2019
ಈ ಸಂದರ್ಭದಲ್ಲಿ ಬಿಎಸ್ಎಫ್ ಯೋಧರು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಗುಂಡಿನ ಚಕಮಕಿಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದರೆ ಇಬ್ಬರು ಗಾಯಗೊಂಡಿದ್ದಾರೆ ಎಂದು ನಕ್ಸಲ್ ನಿಗ್ರಹ ಕಾರ್ಯಾಚರಣೆಗಳ ಡಿಐಜಿ ಸುಂದರ್ರಾಜ್ ಪಿ ತಿಳಿಸಿದ್ದಾರೆ.
ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಛತ್ತೀಸ್ ಗಢದಲ್ಲಿ ಲೋಕಸಭೆ ಚುನಾವಣೆಗೆ ಕೆಲವೇ ದಿನ ಬಾಕಿ ಉಳಿದಿರುವಾಗ ಈ ಘಟನೆ ನಡೆದಿದ್ದು ಆತಂಕ ಸೃಷ್ಟಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ