ತಮಿಳುನಾಡು:
ಉಷ್ಣ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟಗೊಂಡು 4 ಮಂದಿ ಸಾವನ್ನಪ್ಪಿರುವ ದುರ್ಘಟನೆ ಇಂದು ಬೆಳಗ್ಗೆ ನಡೆದಿದೆ.
ರಾಜ್ಯ ರಾಜಧಾನಿ ಚೆನ್ನೈನಿಂದ 180 ಕಿ.ಮೀ ದೂರದಲ್ಲಿರುವ ಕಡಲೂರಿನ ಕೇಂದ್ರ ಸರ್ಕಾರಿ ಸ್ವಾಮ್ಯದ ಎನ್‌ಎಲ್‌ಸಿ ಇಂಡಿಯಾ ಲಿಮಿಟೆಡ್‌ನಲ್ಲಿ (ಹಿಂದೆ ಇದನ್ನು ನೆಯೆವೆಲಿ ಲಿಗ್ನೈಟ್ ಕಾರ್ಪೊರೇಶನ್ ಲಿಮಿಟೆಡ್ ಎಂದು ಕರೆಯಲಾಗುತ್ತಿತ್ತು) ವಿದ್ಯುತ್ ಸ್ಥಾವರದಲ್ಲಿ ಸ್ಫೋಟ ಸಂಭವಿಸಿದೆ.
Tamil Nadu: Explosion at a boiler in stage -2 of the Neyveli lignite plant. 17 injured persons taken to NLC lignite hospital. Visuals from the spot. More details awaited. https://t.co/jtaOudE9P0 pic.twitter.com/FWKYNsePVO
— ANI (@ANI) July 1, 2020
ಈ ವಿದ್ಯುತ್ ಸ್ಥಾವರದಲ್ಲಿ 3 ಸಾವಿರದ 940 ಮೆಗಾ ವ್ಯಾಟ್ ವಿದ್ಯುತ್ ಉತ್ಪತ್ತಿಯಾಗುತ್ತದೆ. ಸ್ಫೋಟ ಸಂಭವಿಸಿದ ಘಟಕದಲ್ಲಿ 1,470 ಮೆಗಾವ್ಯಾಟ್ ವಿದ್ಯುತ್ ಉತ್ಪತ್ತಿ ಮಾಡಲಾಗುತ್ತಿದೆ.ಸ್ಫೋಟ ಸಂಭವಿಸಿದಾಗ ಬಾಯ್ಲರ್ ಕೆಲಸ ಮಾಡುತ್ತಿರಲಿಲ್ಲ. ಘಟನೆ ವೇಳೆ ಸಾಕಷ್ಟು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಸ್ಫೋಟದ ರಭಸಕ್ಕೆ 4 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯ ಬಗ್ಗೆ ನಾವು ತನಿಖೆ ನಡೆಸುತ್ತಿದ್ದೇವೆ ಎಂದು ವಿದ್ಯುತ್ ಸ್ಥಾವರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ