ನವದೆಹಲಿ :
ದೇಶದಲ್ಲಿ ಮಾರಕ ಕೊರೊನಾ ಸೋಂಕಿನ ಅಟ್ಟಹಾಸ ಮುಂದುವರೆದಿದ್ದು,ಒಂದೇ ದಿನದಲ್ಲಿ 40,425 ಮಂದಿಯಲ್ಲಿ ಸೋಂಕು ಪಾಸಿಟಿವ್ ಬಂದಿದ್ದು, ಈವರೆಗೆ ಇದ್ದ ದಾಖಲೆಯನ್ನು ಕೊರೊನಾ ಮೀರಿಸಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 40,425 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಒಂದೇ ದಿನದಲ್ಲಿ ಡೆಡ್ಲಿ ಸೋಂಕಿಗೆ 681 ಮಂದಿ ಬಲಿಯಾಗಿದ್ದಾರೆ. ಏತನ್ಮಧ್ಯೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 11 ಲಕ್ಷ ಗಡಿದಾಟಿದೆ.
India's #COVID19 case tally crosses 11 lakh mark with highest single day spike of 40,425 new cases & 681 deaths reported in the last 24 hours.
Total cases stand at 11,18,043 including 3,90,459 active cases, 7,00,087 cured/discharged/migrated & 27,497 deaths: Health Ministry pic.twitter.com/Zf5TOgWYuS
— ANI (@ANI) July 20, 2020
ಈ ಪೈಕಿ 7,00,087 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದೇ ವೇಳೆ, ಸದ್ಯ ವಿವಿಧ ಆಸ್ಪತ್ರೆಗಳಲ್ಲಿ 3,90,459 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಹೆಮ್ಮಾರಿಯ ಸೋಂಕಿಗೆ ಈವರೆಗೆ ಬಲಿಯಾದವರ ಸಂಖ್ಯೆ 27,497ಕ್ಕೆ ಏರಿಕೆಯಾಗಿದೆ.
ಸೋಂಕು ನಿಯಂತ್ರಣ ಸವಾಲಾಗಿ ಪರಿಣಮಿಸಿರುವ ಬೆನ್ನಲ್ಲೇ ದೇಶದಲ್ಲಿ ಕೊರೊನಾ ದೊಡ್ಡ ಅಘಾತವನ್ನೇ ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ