ದೇಶದಲ್ಲಿ ಒಂದೇ ದಿನ 19,148 ಮಂದಿಗೆ ಕೊರೋನಾ ದೃಢ!!

ನವದೆಹಲಿ :

      ದೇಶದಲ್ಲಿ ಕೊರೋನಾ ವೈರಸ್ ರಣಕೇಕೆ ಹಾಕುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದಾಖಲೆಯ 19,148 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ.

      ಈ ಕುರಿತಂತೆ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 19,148 ಮಂದಿಯಲ್ಲಿ ಮಾರಕ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಡೆಡ್ಲಿ ಕೊರೊನಾಗೆ 434 ಮಂದಿ ಬಲಿಯಾಗಿದ್ದಾರೆ.

      ಇನ್ನು ದೇಶದಲ್ಲಿ ಈವರೆಗೆ ಒಟ್ಟಾರೆ ಸೋಂಕಿತರ ಸಂಖ್ಯೆ 6,04,641 ಕ್ಕೆ ಏರಿಕೆಯಾಗಿದೆ. ಈ ಪೈಕಿ 3,59,860 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 2,26,947 ಸಕ್ರಿಯ ಪ್ರಕರಣಗಳಿದ್ದು, ಆಸ್ಪತ್ಪೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ ಕಿಲ್ಲರ್ ಸೋಂಕಿಗೆ ಬಲಿಯಾದವರ ಸಂಖ್ಯೆ 17834ಕ್ಕೆ ಏರಿಕೆಯಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap