ನವದೆಹಲಿ :
ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದ್ದು ಡೆಡ್ಲಿ ಸೋಂಕಿಗೆ 482 ಮಂದಿ ಬಲಿಯಾಗಿದ್ದಾರೆ.
ಈ ಕುರಿತು ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ದೇಶದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 22,752 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿನಿಂದ ಬಳಲುತ್ತಿದ್ದ 482 ಮಂದಿ ಸಾವನ್ನಪ್ಪಿದ್ದಾರೆ.
India reports a spike of 22,752 new #COVID19 cases and 482 deaths in the last 24 hours. Positive cases stand at 7,42,417 including 2,64,944 active cases, 4,56,831 cured/discharged/migrated & 20,642 deaths: Ministry of Health & Family Welfare pic.twitter.com/scOqaO6gnr
— ANI (@ANI) July 8, 2020
ಇನ್ನು ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 7,42,417ಕ್ಕೆ ಏರಿಕೆಯಾಗಿದ್ದು, ಈ ಪೈಕಿ 4,56,831 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 2,64,944 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಕಿಲ್ಲರ್ ಸೋಂಕಿಗೆ ದೇಶದಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 20,642ಕ್ಕೆ ಏರಿಕೆಯಾಗಿದೆ.