ಮುಂಬೈ :
ಮುಂಬೈ- ಭುವನೇಶ್ವರ ಲೋಕಮಾನ್ಯ ತಿಲಕ್ ಟರ್ಮಿನಸ್ ಎಕ್ಸ್‌ಪ್ರೆಸ್ ರೈಲು ಹಳಿತಪ್ಪಿರುವ ಘಟನೆ ಇಂದು ಬೆಳಗ್ಗೆ ಒಡಿಶಾದ ಕಟಕ್ ಬಳಿ ಸಂಭವಿಸಿದೆ.
ರೈಲಿನ ಐದು ಬೋಗಿಗಳು ಹಳಿ ತಪ್ಪಿ ರೈಲು ಸರಕು ರೈಲಿಗೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಕನಿಷ್ಠ 40 ಜನರು ಗಾಯಗೊಂಡಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಅಪಘಾತದ ಕಾರಣ ಇನ್ನೂ ತಿಳಿದು ಬಂದಿಲ್ಲವಾದರೂ, ಈ ಪ್ರದೇಶದಲ್ಲಿ ಭಾರೀ ಮಂಜು ಇದೆ. ಮಂಜು ಕವಿದಿದ್ದರಿಂದ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು, ಬಳಿಕ ಹಳಿ ತಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡ ಎಲ್ಲಾ ಪ್ರಯಾಣಿಕರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು , ಅವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ಆದರೆ, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ