ಆಗ್ರಾ:

ಡಬ್ಬಲ್ ಡೆಕ್ಕರ್ ಬಸ್ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಐದು ಪ್ರಯಾಣಿಕರು ಸಾವನ್ನಪ್ಪಿದ್ದು, 50 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಶುಕ್ರವಾರ ಬೆಳಗ್ಗೆ ಇಂದು ಬೆಳಗ್ಗೆ ಆಗ್ರಾ- ಲಖನೌ ಎಕ್ಸ್ಪ್ರೆಸ್ವೇಯಲ್ಲಿ ನಡೆದಿದೆ.
ಬಿಹಾರದಿಂದ ಜೈಪುರಕ್ಕೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್ ಹರ್ಯಾಣದ ಫತೆಹಾಬಾದ್ ನ ತಿರುವಿನಲ್ಲಿ ಮರಳನ್ನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದು, ಮಗು ಸೇರಿದಂತೆ ಐವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
Five people including a child killed after a private bus rammed into a parked truck on Agra-Lucknow highway near Fatehabad, today. pic.twitter.com/RRAgD7DvyY
— ANI UP (@ANINewsUP) June 28, 2019
ಈಗಾಗಲೇ ಪೊಲೀಸರು ಸ್ಥಳಕ್ಕೆ ಆಗಮಿಸಿ ಘಟನೆಯ ತನಿಖೆ ನಡೆಸಿದ್ದಾರೆ. ಉತ್ತರಪ್ರದೇಶ ಜಿಲ್ಲಾಡಳಿತದ ಅಧಿಕಾರಿಗಳು ಭೇಟಿ ನೀಡಿ, ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








