ತಿರುವನಂತಪುರಂ :
ಸ್ಯಾನಿಟೈಸರ್ ನ್ನು ಮದ್ಯಕ್ಕೆ ಸೇರಿಸಿ ಸೇವಿಸಿದ ಪರಿಣಾಮ ಐವರು ಸಾವನ್ನಪ್ಪಿ, ಹಲವರು ಗಂಭೀರವಾಗಿರುವ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯ ಕಾಂಜಿಕೋಡ್ನನಲ್ಲಿ ನಡೆದಿದೆ.
ರಾಮನ್ (61), ಅಯ್ಯಪ್ಪನ್ (55), ಅರುಣ್ (22), ಶಿವನ್ (45) ಮತ್ತು ಮೂರ್ತಿ (24) ಮೃತ ದುರ್ದೈವಿಗಳು.
ಇವರು ಪಯಾತುಕಾಡು ಪ್ರದೇಶದ ಬುಡಕಟ್ಟು ವಾಸಿಗಳಾಗಿದ್ದಾರೆ. ಇವರೆಲ್ಲ ಒಂದೇ ಕಾಲೋನಿಯಲ್ಲಿ ವಾಸಿಸುತ್ತಿದ್ದರು. ಭಾನುವಾರ ಸಂಜೆ ಒಟ್ಟಿಗೆ ಮದ್ಯ ಸೇವಿಸಿ ಅಂದೇ ರಾತ್ರಿಯಲ್ಲಿ ಕುಸಿದು ಬಿದಿದ್ದಾರೆ. ನಿರಂತರವಾಗಿ ವಾಂತಿ ಮಾಡಿಕೊಂಡ ಪರಿಣಾಮ ಅವರೆಲ್ಲ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಇನ್ನು ಇವರ ಜೊತೆ ಮದ್ಯ ಸೇವಿಸಿದ ಮಹಿಳೆಯರೂ ಸೇರಿದಂತೆ ಇನ್ನೂ ಕೆಲವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ.
ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಮೃತರು ಮದ್ಯಕ್ಕೆ ಸ್ಯಾನಿಟೈಸರ್ ಮಿಕ್ಸ್ ಮಾಡಿ ಸೇವನೆ ಮಾಡಿದ್ದಾರೆ ಎಂಬುದು ತಿಳಿದು ಬಂದಿದೆ.
ಇಂದು ಸಂಜೆ ಮೃತಪಟ್ಟವರ ಮರಣೋತ್ತರ ಪರೀಕ್ಷೆಯ ವರದಿ ಬರಲಿದ್ದು, ಅದರಲ್ಲಿ ಸಾವಿಗೆ ನಿಖರ ಕಾರಣ ಯಾವುದು ಎಂಬುದು ತಿಳಿದುಬರಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ