ನವದೆಹಲಿ :
ದೇಶದಲ್ಲಿ ಮಾರಕ ಕೊರೊನಾ ಸೋಂಕು ತಲ್ಲಣ ಸೃಷ್ಟಿಸಿದ್ದು, ದಿನೇ ದಿನೇ ವ್ಯಾಪಕವಾಗಿ ಹರಡುತ್ತಿದ್ದು, ಒಂದೇ ದಿನದಲ್ಲಿ 507 ಮಂದಿ ಬಲಿಯಾಗಿದ್ದಾರೆ.
ಈ ಕುರಿತಂತೆ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 18,653 ಮಂದಿಯಲ್ಲಿ ಮಾರಕ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಡೆಡ್ಲಿ ಕೊರೊನಾಗೆ 507 ಮಂದಿ ಬಲಿಯಾಗಿದ್ದಾರೆ.
507 deaths and 18,653 new #COVID19 cases in the last 24 hours; Positive cases in India stand at 5,85,493 including 2,20,114 active cases, 3,47,979 cured/discharged/migrated & 17,400 deaths: Ministry of Health & Family Welfare pic.twitter.com/9Faj9kP65c
— ANI (@ANI) July 1, 2020
ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 5,85,493 ಕ್ಕೆ ಏರಿಕೆಯಾಗಿದ್ದು ಈ ಪೈಕಿ 3,47,979 ಮಂದಿ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 2,20,114 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ದೇಶದಲ್ಲಿ ಈವರೆಗೆ ಕಿಲ್ಲರ್ ಸೋಂಕಿಗೆ 17,400 ಮಂದಿ ಬಲಿಯಾಗಿದ್ದಾರೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
