6 ಮಂದಿ ಇಡಿ ಸಿಬ್ಬಂದಿಗೆ ಕೊರೊನಾ ಪಾಸಿಟಿವ್​!!

ನವದೆಹಲಿ :

Enforcement Directorate (ED) Attaches Rs 483 Crore Properties of ...

      ರಾಷ್ಟ್ರ ರಾಜಧಾನಿಯ ಜಾರಿ ನಿರ್ದೇಶನಾಲಯದ (ಇಡಿ) 6 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. 

      ದೆಹಲಿಯ ಖಾನ್ ಮಾರುಕಟ್ಟೆಯ ಲೋಕನಾಯಕ ಭವನದಲ್ಲಿರುವ ಇಡಿ ಪ್ರಧಾನ ಕಚೇರಿಯ ಸಿಬ್ಬಂದಿಗೆ ಕೋವಿಡ್​ ಪಾಸಿಟಿವ್​ ಬಂದಿದೆ. ಕೊರೊನಾ ಪಾಸಿಟಿವ್ ಕಾಣಿಸಿಕೊಂಡ 6 ಜನ ಅಧಿಕಾರಿಗಳ ಸಂಪರ್ಕದಲ್ಲಿದ್ದ 10 ಅಧಿಕಾರಿಗಳನ್ನು ಕ್ವಾರಂಟೈನ್ ಮಾಡಲಾಗಿದೆ. 

      ಹೀಗಾಗಿ 2 ದಿನಗಳ ಕಾಲ ಇಡಿ ಕೇಂದ್ರ ಕಚೇರಿಯನ್ನು ಸೀಲ್‍ಡೌನ್ ಮಾಡಲಾಗಿದೆ. ಕಚೇರಿಯನ್ನು ಸ್ಯಾನಿಟೈಸ್​ ಮಾಡಲಾಗಿದ್ದು, ನಾಳೆಯವರೆಗೂ ಸೀಲ್​ಡೌನ್​​ ಮಾಡಲಾಗುವುದು ಎಂಬ ಮಾಹಿತಿ ದೊರೆತಿದೆ.

      ಅಕ್ರಮ ಹಣ ವರ್ಗಾವಣೆ ಮತ್ತು ಹವಾಲಾ ದಂಧೆ ಕುರಿತ ಅಪರಾಧಗಳ ಕುರಿತು ತನಿಖೆ ನಡೆಸುವ ಕೇಂದ್ರ ಸಂಸ್ಥೆ ಇಡಿ, ಕೊರೊನಾ ಕುರಿತು ಕಟ್ಟೆಚ್ಚರ ವಹಿಸಿತ್ತು. ಕೇಂದ್ರ ಕಚೇರಿಯನ್ನು ವಾರದಲ್ಲಿ ಎರಡು ಬಾರಿ ಸ್ಯಾನಿಟೈಸ್ ಮಾಡುತ್ತಿತ್ತು. ಅಲ್ಲದೆ ನಿರ್ದಿಷ್ಟ ದಿನದ ಕೆಲಸಕ್ಕೆ ಅಗತ್ಯವಿರುವ ನೌಕರರನ್ನು ಮಾತ್ರ ಕಚೇರಿಗೆ ಬರುವಂತೆ ಸೂಚಿಸಲಾಗಿತ್ತು. ಇಷ್ಟೆಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಂಡರೂ ಇದೀಗ 6 ಜನ ಅಧಿಕಾರಿಗಳಿಗೆ ಸೋಂಕು ತಗುಲಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap