ನವದೆಹಲಿ :
ದೇಶದಲ್ಲಿ ಕೊರೊನಾ ವೈರಸ್ ಸೋಂಕು ಇಳಿಕೆಯ ಹಾದಿಯಲ್ಲಿ ಸಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 61,267 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾಹಿತಿ ಪ್ರಕಾರ, ಭಾರತದಲ್ಲಿ ನಿನ್ನೆ ಒಂದೇ 884 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ಕೊರೊನಾಗೆ ಬಲಿಯಾದವರ ಸಂಖ್ಯೆ 1,03,569 ಕ್ಕೆ ಏರಿಕೆಯಾಗಿದೆ.
ಭಾರತದಲ್ಲಿ ನಿನ್ನೆ ಒಂದೇ 61,267 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 66,85,083 ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಪೈಕಿ 56,62,491 ಮಂದಿ ಗುಣಮುಖರಾಗಿದ್ದಾರೆ. 9,19,023 ಪ್ರಕರಣಗಳು ಸಕ್ರಿಯವಾಗಿವೆ ಎಂದು ತಿಳಿದುಬಂದಿದೆ.
ಸಾಮಾನ್ಯವಾಗಿ ದೇಶದಲ್ಲಿ ಪ್ರತೀನಿತ್ಯ 70ರಿಂದ 80 ಸಾವಿರ ಹೊಸ ಸೋಂಕಿತರು ಪತ್ತೆಯಾಗುತ್ತಿದ್ದರು. ಆದರೆ, ಹಲವು ದಿನಗಳ ಬಳಿಕ ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ