ಉತ್ತರ ಪ್ರದೇಶ:
ಟ್ರಕ್ ಪಲ್ಟಿಯಾಗಿ 7 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿರುವ ಧಾರುಣ ಘಟನೆ ಇಂದು ಮುಂಜಾನೆ ಉತ್ತರ ಪ್ರದೇಶದ ಬದೌನ್ ನಲ್ಲಿ ನಡೆದಿದೆ.
ಗೋಧಿ ತುಂಬಿದ ಚೀಲಗಳನ್ನು ತುಂಬಿ ಬದೌನ್‌ನಿಂದ ವೇಗವಾಗಿ ಬರುತ್ತಿದ್ದ ಟ್ರಕ್ ತಿರುವಿನಲ್ಲಿ ತಿರುವು ಮಾಡುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಹತ್ತಿರದ ಚಹಾದಂಗಡಿಯ ಮೇಲೆ ಬಿದ್ದಿದೆ. ಚಹಾದಂಗಡಿಯ ಬಳಿ ನಿಂತಿದ್ದ ಜನರು ಅದರಡಿಯಲ್ಲಿ ಸಿಲುಕಿದ್ದಾರೆ ಎನ್ನಲಾಗಿದೆ. ಅಪಘಾತದಲ್ಲಿ ಒಟ್ಟು 7 ಮಂದಿ ಸಾವನ್ನಪ್ಪಿದ್ದು, 5 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಗಾಯಾಳುಗಳನ್ನು ಸ್ಥಳಿಯ ಆಸ್ಪತ್ರೆಗೆ ಸೇರಿಸಲಾಗಿದೆ. ಟ್ರಕ್ ಚಾಲಕನ ಅತೀ ವೇಗದ ಚಾಲನೆಯೇ ಈ ಅಪಘಾತಕ್ಕೆ ಕಾರಣವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿಕೆ ನೀಡಿದ್ದಾರೆ.
ಸ್ಥಳೀಯ ಶಾಸಕ ರಾಜೀವ್ ಕುಮಾರ್ ಸಿಂಗ್ ಆಸ್ಪತ್ರೆಗೆ ದೌಡಾಯಿಸಿದ್ದು, ಸಿಎಂ ಯೋಗಿ ಆದಿತ್ಯನಾಥ್ ಪರವಾಗಿ ಗಾಯಾಳುಗಳಿಗೆ ಉಚಿತ ಚಿಕಿತ್ಸೆ, ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
