7 ಮಂದಿ ನಕ್ಸಲರನ್ನು ಸದೆ ಬಡೆದ ಸೇನೆ!!

ಛತ್ತೀಸ್ ಗಢ :

      ಮೀಸಲು ಪಡೆ ಯೋಧರು ಮತ್ತು ನಕ್ಸಲರ ನಡುವಿನ ಕಾಳಗದಲ್ಲಿ ಮೂವರು ಮಹಿಳೆಯರು ಸೇರಿ ಒಟ್ಟು 7 ನಕ್ಸಲರು ಹತರಾಗಿದ್ದಾರೆ. 

       ಛತ್ತೀಸ್ ಘಡದ ರಾಜನಂದಗಾಂವ್ ನ ಸೀತಾಗೋಟಾ ಕಾಡಿನಲ್ಲಿ ನಕ್ಸಲರು ಅಡಗಿರುವ ಕುರಿತು ಮಾಹಿತಿ ಪಡೆದ ಜಿಲ್ಲಾ ಮೀಸಲು ಪಡೆ ಯೋಧರು ಕೂಡಲೇ ಸ್ಥಳಕ್ಕೆ ಧಾವಿಸಿದ್ದಾರೆ. ಈ ವೇಳೆ ನಕ್ಸಲರ ಮೇಲೆ ಗುಂಡಿನ ದಾಳಿ ನಡೆಸಿದ್ದು, ನಕ್ಸಲರೂ ಕೂಡ ಪ್ರತಿದಾಳಿ ನಡೆಸಿದ್ದಾರೆ. ಸುಮಾರು 2 ಗಂಟೆಗಳ ಕಾಲ ನಿರಂತರವಾಗಿ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಮೂವರು ಮಹಿಳೆಯರು ಸೇರಿ 7 ನಕ್ಸಲರು ಸಾವಿಗೀಡಾಗಿದ್ದಾರೆ.
      ಈ ಬಗ್ಗೆ ಮಾಹಿತಿ ನೀಡಿರುವ ಛತ್ತೀಸ್ ಘಡ ಪೊಲೀಸ್ ಮಹಾ ನಿರ್ದೇಶಕ ಡಿಎಂ ಅವಸ್ಥಿ, ಕಾರ್ಯಾಚರಣೆಯಲ್ಲಿ 7 ಮಂದಿ ನಕ್ಸಲರು ಸಾವನ್ನಪ್ಪಿದ್ದು, ಅವರ ಬಳಿ ಇದ್ದ ಸ್ಥಳದಲ್ಲಿ ಎಕೆ 47, 303 ರೈಫಲ್ ಸೇರಿದಂತೆ ಸಾಕಷ್ಟು ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

      ಕಾರ್ಯಾಚರಣೆ ಇನ್ನು ಕೂಡಾ ಮುಂದುವರಿದಿದ್ದು, ಪ್ರದೇಶವನ್ನು ವಶಪಡಿಸಿಕೊಂಡಿರುವ ಜಿಲ್ಲಾ ಮೀಸಲು ಪಡೆ ಯೋಧರು, ಸಾರ್ವಜನಿಕರಿಗೆ ಪ್ರವೇಶ ನಿರ್ಭಂಧಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

 

 

 

Recent Articles

spot_img

Related Stories

Share via
Copy link
Powered by Social Snap