ನವದೆಹಲಿ :
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 7466 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದೆ.
ಕಳೆದ ಒಂದು ವಾರದಿಂದ 6 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಸೋಂಕು ಪತ್ತೆಯಾಗುತ್ತಿದ್ದು, ಇದು ಒಂದೇ ದಿನದಲ್ಲಿ ಇದುವರೆಗಿನ ಗರಿಷ್ಠ ದಾಖಲೆಯಾಗಿದೆ. ಇದೇ ಮೊದಲ ಬಾರಿಗೆ ಒಂದೇ ದಿನದಲ್ಲಿ ಸೋಂಕಿತರ ಸಂಖ್ಯೆ 7 ಸಾವಿರ ಗಡಿ ದಾಟಿದೆ. ಇದರಿಂದ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 1,65,999 ಆಗಿದೆ.
ಇನ್ನು ನಿನ್ನೆ ಒಂದೇ ದಿನದಲ್ಲಿ 175 ಮಂದಿ ಅಸುನೀಗಿದ್ದು, ಒಟ್ಟಾರೆ ಕೊರೊನಾಗೆ ಬಲಿಯಾದವರ ಸಂಖ್ಯೆ 4706 ಆಗಿದೆ. ಇದರಿಂದ ಭಾರತ ಕೊರೊನಾ ಪೀಡಿತ ದೇಶಗಳ ಪಟ್ಟಿಯಲ್ಲಿ 9ನೇ ಸ್ಥಾನಕ್ಕೆ ಜಿಗಿದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ