ನವದೆಹಲಿ :
ಭಾರತದಲ್ಲಿ ಕೊರೋನಾ ಆರ್ಭಟ ಹೆಚ್ಚಾಗಿದ್ದು, ಕಳೆದ 24 ಗಂಟೆಗಳಲ್ಲಿ 757 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ ಕೂಡ 31,358 ಏರಿಕೆಯಾಗಿದೆ ಎಂದು ತಿಳಿದುಬಂದಿದೆ.
ಈ ನಡುವೆ ಒಂದೇ ದಿನ 48,916 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ, ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 13,36,861ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.
Single-day spike of 48,916 positive cases & 757 deaths in India in the last 24 hours.
Total #COVID19 positive cases stand at 13,36,861 including 4,56,071 active cases, 8,49,431 cured/discharged/migrated & 31,358 deaths: Health Ministry pic.twitter.com/HPEz5soYu0
— ANI (@ANI) July 25, 2020
ಜೊತೆಗೆ ಕೊರೋನಾ ಸೋಂಕಿನಿಂದಾಗಿ ಒಂದೇ ದಿನ 757 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 31,358 ಏರಿಕೆಯಾಗಿದೆ ಎಂದು ತಿಳಿದುಬಂದಿದೆ.
ಇನ್ನು 13,36,861 ಮಂದಿ ಸೋಂಕಿತರ ಪೈಕಿ 8,49,431 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಪ್ರಸ್ತುತ ಇನ್ನೂ ದೇಶದಲ್ಲಿ 4,56,071 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ