ನವದೆಹಲಿ :
ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 75,809 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಸೋಂಕಿನಿಂದಾಗಿ 24 ಗಂಟೆಯಲ್ಲಿ 1,133 ಜನರು ದೇಶದಲ್ಲಿ ಮೃತಪಟ್ಟಿದ್ದಾರೆ. ಇದುವರೆಗೂ ಕೋವಿಡ್ ಸೋಂಕಿನಿಂದಾಗಿ ಮೃತಪಟ್ಟವರ ಸಂಖ್ಯೆ 72,775ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 8,83,697.
ಇನ್ನು ಭಾರತದಲ್ಲಿ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 42,80,423ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 33,23,951 ಜನರು ಇದುವರೆಗೂ ಗುಣಮುಖಗೊಂಡು ಡಿಸ್ಚಾರ್ಜ್ ಆಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ