ಕೊರೊನಾ : 24 ಗಂಟೆಗಳಲ್ಲಿ ದೇಶಾದ್ಯಂತ 230 ಸಾವು!!

ನವದೆಹಲಿ: 

      ಭಾರತದಲ್ಲಿ ಕೊರೊನಾ  ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.  ಕಳೆದ 24 ಗಂಟೆಗಳಲ್ಲಿ 230 ಮಂದಿ ಸಾವನ್ನಪ್ಪಿದ್ದಾರೆ.

ದೇಶದಲ್ಲಿ ಪತ್ತೆಯಾಗುತ್ತಿರುವ ಹೊಸ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತು ಕೊರೊನಾದಿಂದಾಗಿ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 8,392 ಕೊರೊನಾ ಪ್ರಕರಣಗಳು ದಾಖಲಾಗಿದ್ದು,  230 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವರದಿಯಲ್ಲಿ ತಿಳಿಸಿದೆ.

      ಈವರೆಗೆ 91,819 ಜನರು ಕರೋನಾದಿಂದ ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ 93,000 ಜನರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

      ದೇಶದಲ್ಲಿ ಕೊರೊನಾ ಸಾವಿನ ಸಂಖ್ಯೆ 5,394 ಕ್ಕೆ ತಲುಪಿದೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಅಂದರೆ 36,000 ಕರೋನಾ ಪ್ರಕರಣಗಳು ದಾಖಲಾಗಿವೆ. ನಂತರದ ಸ್ಥಾನದಲ್ಲಿ ದೆಹಲಿ, ತಮಿಳುನಾಡು ಮತ್ತು ಗುಜರಾತ್ ಇವೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap