ಧಾರಾಕಾರ ಮಳೆ : 2 ತಿಂಗಳ ಮಗು ಸೇರಿ 9 ಜನರ ದುರ್ಮರಣ!!

ಹೈದರಾಬಾದ್ :

    ಭಾರೀ ಮಳೆಯಿಂದಾಗಿ ಕಾಂಪೌಂಡ್ ಗೋಡೆಯೊಂದು ಕುಸಿದು ಹತ್ತು ಮನೆಗಳ ಮೇಲೆ ಬಿದ್ದ ಪರಿಣಾಮ ಎರಡು ತಿಂಗಳ ಮಗು ಸೇರಿದಂತೆ 9 ಮಂದಿ ದಾರುಣವಾಗಿ ಮೃತಪಟ್ಟ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.

     ಚಂದ್ರಯಾನಗುಟ್ಟ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮೃತರಲ್ಲಿ ಒಂದೇ ಕುಟುಂಬದ ಐವರು ಸೇರಿದ್ದಾರೆ. 4 ಜನರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಅನಾಹುತದಲ್ಲಿ 2 ತಿಂಗಳ ಮಗು ಸೇರಿದಂತೆ 9 ಮಂದಿ ಮೃತಪಟ್ಟಿದ್ದಾರೆ.

      ಕಳೆದ ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಸುಮಾರು 10 ಮನೆಗಳ ಮೇಲೆ ಕಾಂಪೌಂಡ್ ಗೋಡೆ ಬಿದ್ದಿದೆ. ದುರ್ಘಟನೆಯಿಂದ ಎರಡು ಮನೆಗಳು ಸಂಪೂರ್ಣವಾಗಿ ಹಾನಿಯಾಗಿದೆ.

     ಈ ಕುರಿತು ಟ್ವೀಟ್ ಮಾಡಿದ ಸಂಸದ ಅಸಾದುದ್ದೀನ್ ಒವೈಸಿ, ನಾನು ಬಂಡಲಗುಡದ ಮೊಹಮ್ಮದಿಯಾ ಹಿಲ್ ನಲ್ಲಿ ಸ್ಥಳ ಪರಿಶೀಲನೆಯಲ್ಲಿದ್ದೆ. ಪಕ್ಕದ ಜಮೀನಿನ ಗೋಡೆ ಕುಸಿದು ಬಿದ್ದು 9 ಜನರು ಸಾವನ್ನಪ್ಪಿದರು ಮತ್ತು 2 ಮಂದಿ ಗಾಯಗೊಂಡರು ಎಂದಿದ್ದಾರೆ.

     ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ಜನರು ಮುನ್ನೆಚ್ಚರಿಕೆ ವಹಿಸುವಂತೆ ಹೈದರಾಬಾದ್ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap