ಸ್ಕಾರ್ಪಿಯೋ – ಟ್ರಕ್ ಢಿಕ್ಕಿ : 9 ಜನ ದಾರುಣ ಸಾವು!!

ಉತ್ತರಪ್ರದೇಶ :

      ಸ್ಕಾರ್ಪಿಯೋ ಮತ್ತು ಟ್ರಕ್​ ಮುಖಾಮುಖಿ ಡಿಕ್ಕಿಯಾದ ಪರಿಣಾಮ  ಪರಿಣಾಮ 9 ಜನ ಸಾವನ್ನಪ್ಪಿರುವ ದುರ್ಘಟನೆ ಲಕ್ನೋ – ಪ್ರಯಾಗ್​ರಾಜ್​ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

       ರಾಜಸ್ಥಾನದಿಂದ ಬಿಹಾರಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಬಲಿಯಾದವರಲ್ಲಿ ನಾಲ್ವರು ಪುರುಷರು, ಇಬ್ಬರು ಮಕ್ಕಳು ಮತ್ತು ಮೂವರು ಮಹಿಳೆಯರು ಸೇರಿದ್ದಾರೆ.

      ಮೃತಪಟ್ಟವರು ರಾಜಸ್ಥಾನದಲ್ಲಿ ಕೆಲಸ ಮಾಡುತ್ತಿದ್ದು, ಬಿಹಾರ ರಾಜ್ಯಕ್ಕೆ ತಮ್ಮ ಮನೆಗೆ ಸ್ಕಾರ್ಪಿಯೋ ದಲ್ಲಿ ವಾಪಸ್ಸಾಗುತ್ತಿದ್ದರು ಎನ್ನಲಾಗಿದೆ.  

     ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap