ಮದುವೆ ಮುಗಿಸಿ ಬರುವಾಗ ಭೀಕರ ಅಪಘಾತ: 9 ಮಂದಿ ಸಾವು!!

ಹಾಪುರ್:

      ಮದುವೆ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ಪಿಕ್​​​​ ಅಪ್​​​ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಹಫೀಜ್​​​​​​ಪುರ ಸಮೀಪದ ಹಾಪುರ್​ನಲ್ಲಿ ಸೋಮವಾರ ನಡೆದಿದೆ.

ದುರಂತ

      2 ವಾಹನಗಳು ಅತಿ ವೇಗವಾಗಿ ಬರುತ್ತಿದ್ದ ವೇಳೆ ಅಪರಿಚಿತ ವಾಹನ ಪಿಕ್​​​​​​ ಅಪ್​​ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. 

      ಡಿಕ್ಕಿಯಿಂದ ಪಿಕ್​​​ ಅಪ್​​ ವಾಹನ ಸಂಪೂರ್ಣ ಜಖಂಗೊಂಡಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೀರತ್​ಗೆ ರವಾನಿಸಲಾಗಿದೆ.

      ಈ ಪ್ರಕರಣವನ್ನು ತನಿಖೆ ನಡೆಸಿ ಸಂಬಂಧಪಟ್ಟ ಆರೋಪಿಗಳನ್ನು ಕೂಡಲೇ ಬಂಧಿಸಲಾಗುವುದು ಎಂದು ಹೆಚ್ಚುವರಿ ಪೊಲೀಸ್​​​​​​ ಆಯುಕ್ತ ಸರ್ವೇಶ್​​ ಕುಮಾರ್​ ತಿಳಿಸಿದ್ದಾರೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap