ಉಗ್ರರ ಗ್ರೆನೇಡ್ ದಾಳಿಗೆ ಓರ್ವ ಯೋಧ ಹುತಾತ್ಮ!!

ಶ್ರೀನಗರ:

      ಜಮ್ಮು ಮತ್ತು ಕಾಶ್ಮೀರದ ಸೋಪೋರ್ ಜಿಲ್ಲೆಯಲ್ಲಿ ಸಿಆರ್ ಪಿಎಫ್ ಯೋಧರ ಕ್ಯಾಂಪ್ ಮೇಲೆ ನಡೆದ ಗ್ರೆನೇಡ್ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ.

    ಇಂದು(ಗುರುವಾರ) ಬೆಳಗ್ಗೆ ಈ ಘಟನೆ ಸಂಭವಿಸಿದ್ದು, ಭಯೋತ್ಪಾದಕರೇ ಗ್ರೆನೇಡ್ ದಾಳಿ ನಡೆಸಿರುವುದು ತಿಳಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಪಾಕಿಸ್ತಾನ ಗಡಿಯಲ್ಲಿ ಕದನವಿರಾಮ ಉಲ್ಲಂಘಿಸುತ್ತಿರುವ ಮಾಹಿತಿಯೂ ಲಭ್ಯವಾಗಿದೆ.

     ಜಮ್ಮು-ಕಾಶ್ಮೀರದ ಸೊಪೊರ್​ನಲ್ಲಿ ಗ್ರೆನೈಡ್​ ದಾಳಿ ನಡೆದಿದ್ದು, ದಾಳಿಯಿಂದಾಗಿ ಮೂವರು ಪೊಲೀಸ್​ ಸಿಬ್ಬಂದಿ ಗಾಯಗೊಂಡಿದ್ದಾರೆ  ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

      ಭದ್ರತಾ ಸಿಬ್ಬಂದಿ ಈ ಪ್ರದೇಶ ಸುತ್ತುವರಿದಿದ್ದು, ದಾಳಿಕೋರರು ಎಲ್ಲಿಂದ ದಾಳಿ ನಡೆಸಿದರು ಎಂಬುದನ್ನು ಪರಿಶೀಲನೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

 

Recent Articles

spot_img

Related Stories

Share via
Copy link
Powered by Social Snap