ಉತ್ತರ ಪ್ರದೇಶ :
ಕಾರು-ಬೈಕ್-ಸೈಕಲ್ ನಡುವೆ ಡಿಕ್ಕಿ ಸಂಭವಿಸಿ ಐವರು ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ದಿಯೋರಿಯಾದಲ್ಲಿ ನಡೆದಿದೆ.
ದಿಯೋರಿಯಾದ ಸಲೆಂಪುರ್-ಲಾರ್ ರಸ್ತೆಯಲ್ಲಿ ತಡರಾತ್ರಿ ಈ ಅಪಘಾತ ನಡೆದಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ತಲುಪಿದಾಗ ಆರು ಜನರು ಗಂಭೀರ ಗಾಯಗಳೊಂದಿಗೆ ರಸ್ತೆ ಬದಿ ಬಿದ್ದಿದ್ದರು. ವಾಹನಗಳು ನುಜ್ಜುಗುಜ್ಜಾಗಿದ್ದವು
ಎಲ್ಲರನ್ನೂ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಐವರು ಅಷ್ಟರಲ್ಲೇ ಮೃತಪಟ್ಟಿದ್ದರು. ಇನ್ನು ತೀವ್ರವಾಗಿ ಗಾಯಗೊಂಡಿರುವ ವ್ಯಕ್ತಿಗೆ ಸದ್ಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ದಿಯೋರಿಯಾ ಪೊಲೀಸರು ತಿಳಿಸಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ ಎಂದು ಸಿಂಗ್ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
