ನವದೆಹಲಿ:
ಬಹುಭಾಷಾ ನಟಿ ಮತ್ತು ರಾಜಕಾರಣಿ ಜಯಪ್ರದಾ ಅವರು ಇಂದು ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಎಸ್‌ಪಿ ನಾಯಕ ಅಮರ್ ಸಿಂಗ್ ಆಪ್ತರಾಗಿದ್ದ ಜಯಪ್ರದ ಆ ಪಕ್ಷದಿಂದ ಎರಡು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದರು. ಆಯ್ಕೆಯಾಗಿದ್ದರು. ಇದೀಗ ಪಕ್ಷ ತೊರೆದಿರುವ ಜಯಪ್ರದ, ಬಿಜೆಪಿ ಸೇರುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
Delhi: Veteran actor and former MP Jaya Prada joins Bharatiya Janata Party. pic.twitter.com/vmZD3H1PSL
— ANI (@ANI) March 26, 2019
ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯ ವಿಧಾನವನ್ನು ಸದಾ ಶ್ಲಾಘಿಸುತ್ತ, ಬಿಜೆಪಿ ಸೇರುವ ಸೂಚನೆ ನೀಡಿದ್ದ ಜಯಪ್ರದಾ ಇಂದು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದು, ರಾಂಪುರದಿಂದ ಸ್ಪರ್ಧೆಗಿಳಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
55 ವರ್ಷ ವಯಸ್ಸಿನ ಜಯಪ್ರದಾ ಅವರು 2004 ಮತ್ತು 2009ರಲ್ಲಿ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿ ರಾಂಪುರ ಲೋಕಸಭಾ ಕ್ಷೇತ್ರದಿಂದ ಸಂಸದೆಯಾಗಿ ಆಯ್ಕೆಯಾಗಿದ್ದರು. ಆ ಬಳಿಕ ಅವರು ಪಕ್ಷದಿಂದ ಉಚ್ಛಾಟನೆಗೊಂಡಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜಯಪ್ರದಾ ಸ್ಪರ್ಧಿಸುವುದು ಇನ್ನೂ ಖಚಿತವಾಗಿಲ್ಲ. ಅವರ ಉಮೇದುವಾರಿಕೆ ಕುರಿತಾಗಿ ಬಿಜೆಪಿ ನಾಯಕರೂ ಇದುವರೆಗೂ ಗೌಪ್ಯತೆ ಕಾಯ್ದುಕೊಂಡು ಬಂದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
