ಅಹಮದಾಬಾದ್:
ಕರೊನಾ ಸೋಂಕಿತ ರೋಗಿಯೊಬ್ಬರನ್ನು ನಿಗದಿತ ವೇಳೆಗೆ ಅಡ್ಮಿಟ್ ಮಾಡಿಕೊಳ್ಳದೇ ಅವರ ಸಾವಿಗೆ ಕಾರಣವಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ 77 ಲಕ್ಷ ರೂ. ದಂಡ ವಿಧಿಸಲಾಗಿದೆ.
ಇಲ್ಲಿಯ ಶಾಹಿಭಾಗ್‌ನಲ್ಲಿರುವ ರಾಜಸ್ಥಾನ ಆಸ್ಪತ್ರೆಗೆ 25 ಲಕ್ಷ ರೂಪಾಯಿ, ಆಡಳಿತ ಮಂಡಳಿ ಎಂಟು ಸದಸ್ಯರಿಗೆ ತಲಾ 2 ಲಕ್ಷ ರೂ. ಮತ್ತು ಹದಿನೆಂಟು ಟ್ರಸ್ಟಿಗಳಿಗೆ 36 ಲಕ್ಷ ಸೇರಿ ಒಟ್ಟು 77 ಲಕ್ಷ ದಂಡ ವಿಧಿಸಿದ್ದೇವೆ. ಕ್ರಿಮಿನಲ್ ಪ್ರಕರಣ ಕೂಡ ದಾಖಲಿಸಲಾಗಿದೆ ಎಂದು ಅಹಮದಾಬಾದ್ ಪಾಲಿಕೆ ತಿಳಿಸಿದೆ.
ಜೂನ್ 18ರಂದು ಕೋವಿಡ್-19 ರೋಗಿಯನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು, ಅವರಿಗೆ ವೆಂಟಿಲೇಟರ್ ಬೆಂಬಲದ ಅವಶ್ಯಕತೆಯಿತ್ತು. ಆದರೆ ಆಸ್ಪತ್ರೆಯ ದ್ವಾರದಲ್ಲಿ 20 ನಿಮಿಷ ಕಾಯಿಸಲಾಯಿತು. ಸೋಂಕಿತನಿಗೆ ಆಸ್ಪತ್ರೆ ಗೇಟ್ ತೆರೆಯಲು ಸಿಬ್ಬಂದಿ ತಡಮಾಡಿದ್ದರು. ಈ ಹಿನ್ನೆಲೆಯಲ್ಲಿ ಅವರು ಅಲ್ಲಿಯೇ ಪ್ರಾಣ ಕಳೆದುಕೊಂಡಿದ್ದರು.
ಕೊರೊನಾವೈರಸ್ ಸೋಂಕಿತನಿಗೆ ಚಿಕಿತ್ಸೆ ನೀಡುವಲ್ಲಿ ವಿಳಂಬ ತೋರಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡುವಂತೆ ಕಳೆದ ಜೂನ್.22ರಂದು ಗುಜರಾತ್ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿತ್ತು. ಆದರೆ ಆಸ್ಪತ್ರೆಯ ಆಡಳಿತ ಮಂಡಳಿಯಿಂದ ಯಾವುದೇ ಪ್ರತಿಕ್ರಿಯೆ ವ್ಯಕ್ತ ವಾಗಿರಲಿಲ್ಲ
ಈ ಪ್ರಕರಣ ಹೈಕೋರ್ಟ್ ಮುಂದೆ ಬಂದಿದ್ದು, ಜವಾಬ್ದಾರಿಯುತ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪಾಲಿಕೆಗೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಕೊರೊನಾ ವೈರಸ್ ಪಾಸಿಟಿವ್ ಇದ್ದ ವ್ಯಕ್ತಿ ಸಾವಿಗೆ ಆಸ್ಪತ್ರೆ ನಿರ್ಲಕ್ಷ ಕಾರಣ ಎಂದು 77 ಲಕ್ಷ ರೂ. ದಂಡ ವಿಧಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ