ನವದೆಹಲಿ:
ಉದ್ಯೋಗಿಯೊಬ್ಬರಲ್ಲಿ ಕೊರೋನಾ ವೈರಸ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯು, ದೆಹಲಿಯ ಪ್ರಧಾನ ಕಚೇರಿಯನ್ನ 2 ದಿನಗಳ ಕಾಲ ಸೀಲ್ಡೌನ್ ಮಾಡಲಾಗಿದೆ.
ಜ್ವರ, ಶೀತ, ಕೆಮ್ಮು ಮತ್ತಿತರ ಕೊರೊನಾ ಲಕ್ಷಣ ಹೊಂದಿದ್ದ ಉದ್ಯೋಗಿಯೊಬ್ಬರಿಗೆ ಪರೀಕ್ಷೆ ನಡೆಸಿದಾಗ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ ಎಂದು ಏರ್ ಇಂಡಿಯಾ ಅಧಿಕಾರಿಗಳು ತಿಳಿಸಿದ್ದಾರೆ.
ಹೀಗಾಗಿ ಮಂಗಳವಾರ ಮತ್ತು ಬುಧವಾರ ಎರಡು ದಿನಗಳಿಗೆ ಅನುಗುಣವಾಗಿ ಕಚೇರಿಯನ್ನು ಸೀಲ್ ಮಾಡಲಾಗಿದೆ ಎಂದು ಏರ್ಲೈನ್ಸ್ ತಿಳಿಸಿದೆ. ಈ ಎರಡು ದಿನ ಕಟ್ಟಡದಲ್ಲಿ ಸಂಪೂರ್ಣ ಸ್ವಚ್ಛತಾ ಕಾರ್ಯ ನಡೆಯಲಿದೆ. ಕಟ್ಟಡವನ್ನು ಸಂಪೂರ್ಣ ಸ್ಯಾನಿಟೈಸಿಂಗ್ ಮಾಡಲು ವಿಮಾನಯಾನ ಸಂಸ್ಥೆ ನಿರ್ಧರಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
