ಉದ್ಯೋಗಿಗೆ ಕೊರೋನಾ : ಏರ್ ಇಂಡಿಯಾ ಪ್ರಧಾನ ಕಚೇರಿ ಸೀಲ್​ ಡೌನ್!!

ನವದೆಹಲಿ:

        ಉದ್ಯೋಗಿಯೊಬ್ಬರಲ್ಲಿ ಕೊರೋನಾ ವೈರಸ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯು, ದೆಹಲಿಯ ಪ್ರಧಾನ ಕಚೇರಿಯನ್ನ 2 ದಿನಗಳ ಕಾಲ ಸೀಲ್ಡೌನ್ ಮಾಡಲಾಗಿದೆ.

      ಜ್ವರ, ಶೀತ, ಕೆಮ್ಮು ಮತ್ತಿತರ ಕೊರೊನಾ ಲಕ್ಷಣ ಹೊಂದಿದ್ದ ಉದ್ಯೋಗಿಯೊಬ್ಬರಿಗೆ ಪರೀಕ್ಷೆ ನಡೆಸಿದಾಗ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ ಎಂದು ಏರ್ ಇಂಡಿಯಾ ಅಧಿಕಾರಿಗಳು ತಿಳಿಸಿದ್ದಾರೆ.

Air India Delhi Office Shut For 2 Days As Staff Tests Positive For Coronavirus

      ಹೀಗಾಗಿ ಮಂಗಳವಾರ ಮತ್ತು ಬುಧವಾರ ಎರಡು ದಿನಗಳಿಗೆ ಅನುಗುಣವಾಗಿ ಕಚೇರಿಯನ್ನು ಸೀಲ್ ಮಾಡಲಾಗಿದೆ ಎಂದು ಏರ್​ಲೈನ್ಸ್​ ತಿಳಿಸಿದೆ. ಈ ಎರಡು ದಿನ ಕಟ್ಟಡದಲ್ಲಿ ಸಂಪೂರ್ಣ ಸ್ವಚ್ಛತಾ ಕಾರ್ಯ ನಡೆಯಲಿದೆ. ಕಟ್ಟಡವನ್ನು ಸಂಪೂರ್ಣ ಸ್ಯಾನಿಟೈಸಿಂಗ್​ ಮಾಡಲು ವಿಮಾನಯಾನ ಸಂಸ್ಥೆ ನಿರ್ಧರಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap