ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮ: ಅಮೆರಿಕಕ್ಕೆ ಪಾಕ್‌ ಭರವಸೆ

0
21

 ವಾಷಿಂಗ್ಟನ್‌: 

      ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಆತ್ಮಾಹುತಿ ದಾಳಿಗೆ ಸಂಬಂಧಿಸಿದಂತೆ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪಾಕ್ ಭರವಸೆ ನೀಡಿದೆ ಎಂದು ಅಮೆರಿಕ ತಿಳಿಸಿದೆ.

      ಈ ಕುರಿತು ಅಮೆರಿಕ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್ ಬಫಲ್ಟನ್ ಅವರು ಟ್ವೀಟ್ ಮಾಡಿದ್ದು, ಅದರಲ್ಲಿ ”ಎಲ್ಲ ಉಗ್ರರ ವಿರುದ್ಧ ಕಠಿಣವಾಗಿ ನಡೆದುಕೊಳ್ಳಲಾಗುತ್ತದೆ ಹಾಗೂ ಭಾರತದೊಂದಿಗಿನ ಆತಂಕದ ವಾತಾವರಣ ಶಮನಗೊಳಿಸಲು ಸೂಕ್ತ ಕ್ರಮವಹಿಸಲಾಗುತ್ತದೆ ಎಂದು ಪಾಕಿಸ್ತಾನ ಭರವಸೆ ನೀಡಿದೆ” ಎಂದು ಹೇಳಿದ್ದಾರೆ.

      ಪಾಕಿಸ್ತಾನದ ವಿದೇಶಾಂಗ ಸಚಿವ ಖುರೇಶಿ ಅವರೊಂದಿಗೆ ಮಾತನಾಡಿದ್ದು, ಪಾಕಿಸ್ತಾನದಿಂದ ಕಾರ್ಯಾಚರಿಸುತ್ತಿರುವ ಜೈಷ್ ಎ ಮೊಹಮ್ಮದ್ ಹಾಗೂ ಇತರೆ ಉಗ್ರ ಸಂಘಟನೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರಸ್ತಾಪಿಸಿದ್ದೇವೆ. ಎಲ್ಲ ಉಗ್ರರ ವಿರುದ್ಧ ದೃಢವಾದ ಕ್ರಮ ತೆಗೆದುಕೊಳ್ಳುವಂತೆ ವಿದೇಶಾಂಗ ಸಚಿವರು ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

Related image

      ಭಾರತದ ವಿದೇಶಾಂಗ ಕಾರ್ಯದರ್ಶಿ ವಿಜಯ್‌ ಗೋಖಲೆ ಅಮೆರಿಕ ಭೇಟಿಯಲ್ಲಿರುವ ಸಂದರ್ಭದಲ್ಲಿಯೇ ಬೋಲ್ಟನ್‌ ಖುರೇಷಿ ಅವರನ್ನು ಸಂಪರ್ಕಿಸಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಅಂತೆಯೇ ವಿಜಯ್‌ ಗೋಖಲೆ ಅಮೆರಿಕ ಪ್ರವಾಸದ ಮೊದಲ ದಿನ, ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮೈಕ್‌ ಪಾಂಪಿಯೊ ಅವರನ್ನೂ ಭೇಟಿ ಮಾಡಿ ಚರ್ಚಿಸಿದ್ದಾರೆ.

     ಉಗ್ರರ ವಿರುದ್ಧ ಹೋರಾಟದಲ್ಲಿ ಭಾರತ ಸರ್ಕಾರ ಮತ್ತು ಜನರೊಂದಿಗೆ ಅಮೆರಿಕ ನಿಲ್ಲುತ್ತದೆ ಎಂದು ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ ಪಾಂಪಿಯೋ ತಿಳಿಸಿದ್ದಾರೆ.

      ಭಯೋತ್ಪಾದಕರ ವಿರುದ್ಧ ಕ್ರಮಕೈಗೊಳ್ಳಲು ಜಾಗತಿಕ ಒತ್ತಡ ಹೆಚ್ಚಾಗುತ್ತಿದ್ದಂತೆ, ಎಲ್ಲಾ ಭಯೋತ್ಪಾದಕ ಸಂಘಟನೆಗಳ ವಿರುದ್ಧ ದೃಢವಾದ ನಿಲುವು ಹೊಂದಲಾಗುವುದು ಮತ್ತು ಭಾರತದೊಂದಿಗಿನ ಉದ್ವಿಗ್ನತೆಯನ್ನು ಶಮನಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಅಮೆರಿಕಕ್ಕೆ ಪಾಕಿಸ್ತಾನ ಭರವಸೆ ನೀಡಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

LEAVE A REPLY

Please enter your comment!
Please enter your name here