ನವದೆಹಲಿ :
ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಗ್ಯದಲ್ಲಿ ಮತ್ತೆ ಏರುಪೇರು ಉಂಟಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಏಮ್ಸ್ ಗೆ ದಾಖಲು ಮಾಡಲಾಗಿದೆ.
ಕೊರೊನಾ ವೈರಸ್ ಸೋಂಕಿನಿಂದ ಬಳಲುತ್ತಿದ್ದ ಅವರು, ಮೊನ್ನೆಯಷ್ಟೇ ಚೇತರಿಸಿಕೊಂಡು ಏಮ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು.
ಕೊರೊನಾ ಚಿಕಿತ್ಸೆ ಚೇತರಿಕೆಯ ನಂತರ ಕಂಡು ಬರುವ ಕೆಲವು ಸಾಮಾನ್ಯ ಅನಾರೋಗ್ಯ (ಮೈ ಕೈ ನೋವು)ದ ಕಾರಣ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅವರ ಆರೋಗ್ಯ ಸ್ಥಿರವಾಗಿದೆ. ಆಸ್ಪತ್ರೆಯಿಂದಲೇ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಏಮ್ಸ್ ಪ್ರಕಟಣೆ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ