ಮಂಡ್ಯ :
ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ರವರು ಮಂಡ್ಯ ಜೆಡಿಎಸ್ ಅಭ್ಯರ್ಥಿಯ ಪರವಾಗಿ ಇಂದು ಪ್ರಚಾರವನ್ನು ಮಾಡಲಿದ್ದಾರೆ.
ದೇವೇಗೌಡ್ರ ವಿನಂತಿಯ ಮೇರೆಗೆ ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಮತ್ತು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ‘ನಾಯ್ಡು’ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರಕ್ಕೆ ಮಂಡ್ಯಗೆ ಬರುತ್ತಿದ್ದು, ಕ್ಷೇತ್ರದ ವ್ಯಾಪ್ತಿಯ ಮಳವಳ್ಳಿ, ಮೇಲುಕೋಟೆ ಮತ್ತು ಪಾಂಡವಪುರದಲ್ಲಿ ನಾಯ್ಡು ಪ್ರಚಾರ ನಡೆಸಲಿದ್ದಾರೆ.
ನಂತರ ಇಂದು ಸಂಜೆ ಪಾಂಡವಪುರದಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯಲ್ಲಿ ಚಂದ್ರಬಾಬು ನಾಯ್ಡು ಪಾಲ್ಗೊಳ್ಳಲಿದ್ದು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಮಂಡ್ಯ ಜಿಲ್ಲೆಯ ಸಚಿವರು, ಶಾಸಕರು ಹಾಗೂ ಸ್ಥಳೀಯ ಮುಖಂಡರು ಪಾಲ್ಗೊಳ್ಳಲಿದ್ದಾರೆ.
ಇನ್ನು ಸುಮಲತಾ ನಾಯ್ಡು ಸಮುದಾಯಕ್ಕೆ ಸೇರಿದ್ದು, ಅವರ ಮತಗಳನ್ನು ಸೆಳೆಯಲು ಆಂಧ್ರ ಸಿಎಂ ಅವರನ್ನು ಉದ್ದೇಶ ಪೂರ್ವಕವಾಗಿ ಆಹ್ವಾನಿಸಲಾಗಿದೆ. ಈ ಮೂಲಕ ಸಿಎಂ ಮಗನ ಗೆಲುವಿಗೆ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.
ಆಂಧ್ರ ಪ್ರದೇಶದಲ್ಲಿ ಈಗಾಗಲೇ ಚುನಾವಣೆ ಮುಗಿದಿದ್ದು, ಈಗ ಚಂದ್ರಬಾಬು ನಾಯ್ಡು ಬಾಬು ಕರ್ನಾಟಕದಲ್ಲಿ ಪ್ರಚಾರಕ್ಕೆ ಮುಂದಾಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ