ನವದೆಹಲಿ :
ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾಗಿ ಉತ್ತರಪ್ರದೇಶ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಅನೂಪ್ ಚಂದ್ರ ಪಾಂಡೆ ಅವರನ್ನು ನೇಮಕ ಮಾಡಲಾಗಿದೆ.
ಚುನಾವಣಾ ಆಯೋಗದ ಮುಖ್ಯ ಆಯುಕ್ತರಾಗಿದ್ದ ಸುನಿಲ್ ಅರೋರಾ ಅವರು ಏಪ್ರಿಲ್ 12ರಂದು ನಿವೃತ್ತರಾಗಿದ್ದರು. ಆ ಸ್ಥಾನಕ್ಕೆ ಉತ್ತರ ಪ್ರದೇಶ ಕೇಡರ್‌ನ ನಿವೃತ್ತ ಐಎಎಸ್ ಅಧಿಕಾರಿ ಅನೂಪ್ ಚಂದ್ ಪಾಂಡೆ ಅವರನ್ನು ನೇಮಿಸಲಾಗಿದೆ.
ಮೂರು ಸದಸ್ಯರ ಆಯೋಗದಲ್ಲಿ ಸುಶೀಲ್ ಚಂದ್ರ ಹಾಗೂ ರಾಜೀವ್ ಕುಮಾರ್ ಅವರು ಕಾರ್ಯ ನಿರ್ವಹಿಸುತ್ತಿದ್ದು, ಇನ್ನೊಬ್ಬ ಆಯುಕ್ತರ ಹುದ್ದೆ ಖಾಲಿ ಉಳಿದಿತ್ತು. ಇದೀಗ ಉತ್ತರ ಪ್ರದೇಶ ಮಾಜಿ ಮುಖ್ಯ ಕಾರ್ಯದರ್ಶಿ ಅನೂಪ್ ಚಂದ್ರ ಪಾಂಡೆ ಅವರನ್ನು ನೇಮಿಸಲಾಗಿದೆ.
ಅನೂಪ್ ಚಂದ್ರಪಾಂಡೆ ಅವರು 1984ರ ಕೇಡರ್ ನ ಐಎಎಸ್ ಅಧಿಕಾರಿಯಾಗಿದ್ದು, ಈ ಹಿಂದೆ ರಕ್ಷಣಾ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಮತ್ತು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಯಿಸಿದ್ದರು. ಬಳಿಕ 2019 ಆಗಸ್ಟ್ ನಲ್ಲಿ ಉತ್ತರ ಪ್ರದೇಶ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ನಿವೃತ್ತಿಯಾಗಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ