ಪ್ರತ್ಯೇಕ ಎನ್ ಕೌಂಟರ್ : ನಾಲ್ವರು ಉಗ್ರರ ಹತ್ಯೆ!!

ಶ್ರೀನಗರ:

      ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ನಾಲ್ವರು ಉಗ್ರರು ಮೃತಪಟ್ಟಿದ್ದಾರೆ.

      ಜಮ್ಮು-ಕಾಶ್ಮೀರದಲ್ಲಿ ಇತ್ತೀಚಿನ ದಿನಗಳಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎನ್ ಕೌಂಟರ್ ಗಳು ಮುಂದುವರಿಯುತ್ತಿದ್ದು, ಖಚಿತ ಮಾಹಿತಿಯನ್ನು ಪಡೆದು ಭದ್ರತಾ ಸಿಬ್ಬಂದಿ ಕಾರ್ಯಾಚರಣೆಯನ್ನು ಆರಂಭಿಸಿದ್ದರು. ಕುಲ್ಗಾಮ್ ಮತ್ತು ಅನಂತ್ ನಾಗ್ ಜಿಲ್ಲೆಗಳಲ್ಲಿಉಗ್ರರು ಅಡಗಿದ್ದ ಖಚಿತ ಮಾಹಿತಿ ಪಡೆದು ತೆರಳಿದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.  ಎರಡು ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ನಾಲ್ಕು ಮಂದಿ ಉಗ್ರರು ಹತರಾಗಿದ್ದಾರೆ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

      2020ರ ಜನವರಿಯಿಂದ ಜೂನ್ 10ರವರೆಗೆ 100 ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ.  ಕಾಶ್ಮೀರದಲ್ಲಿ ಎರಡು ದಿನಗಳ ಕಾಲ ನಡೆದ ಗುಂಡಿನ ಚಕಮಕಿಯಲ್ಲಿ 9 ಮಂದಿ ಉಗ್ರರನ್ನು ಸದೆಬಡಿಯಲಾಗಿತ್ತು. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

 

Recent Articles

spot_img

Related Stories

Share via
Copy link
Powered by Social Snap