ಪುಲ್ವಾಮಾ:
ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಯೋಧರು ಹಾಗೂ ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಮೇಜರ್ ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.
ಮೇಜರ್ ಡಿ.ಎಸ್ ದೊಂಡಿಯಾಲ್, ಹೆಡ್ ಕಾನ್ಸ್ ಸ್ಟೇಬಲ್ ಸೇವಾರಾಂ, ಸಿಪಾಯಿ ಅಜಯ್ ಕುಮಾರ್, ಹರೀಶ್ ಸಿಂಗ್ ಹುತಾತ್ಮರಾಗಿದ್ದಾರೆ.
Visuals: The 4 Army personnel including a Major, who were killed in action during encounter between terrorists and security forces, in Pinglan area of Pulwama district, belonged to 55 Rashtriya Rifles. #JammuAndKashmir (Visuals deferred by unspecified time) pic.twitter.com/Wa2sxz3bzT
— ANI (@ANI) February 18, 2019
40 ಯೋಧರ ಬಲಿ ಪಡೆದ ಆದಿಲ್ ದಾರ್ ಗೆ ನೆರವು ನೀಡಿದ್ದ ಉಗ್ರರ ಉಗ್ರರು ಅಡಗಿಕೊಂಡಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡೆ, ಸಿಆರ್‌ಪಿಎಫ್ ಮತ್ತು ವಿಶೇಷ ಕಾರ್ಯಾಚರಣೆ ಪಡೆ ಸೋಮವಾರ ನಸುಕಿನಲ್ಲಿ ಕಾರ್ಯಾಚರಣೆ ಕೈಗೊಂಡಿತ್ತು. ಈ ವೇಳೆ ದಾಳಿ ನಡೆಸಿದಾಗ ಉಗ್ರರು ಪ್ರತಿ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಸೇನಾ ಮೇಜರ್ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಉಗ್ರರು ಹಾಗೂ ಯೋಧರ ನಡುವಿನ ಈ ಫೈರಿಂಗ್ ಇನ್ನೂ ಮುಂದುವರೆದಿದೆ ಎನ್ನಲಾಗಿದೆ.
ಪುಲ್ವಾಮಾದ ಪಿಂಗಲಾನ್ ಪ್ರದೇಶದಲ್ಲಿ ರಾತ್ರಿ ಸುಮಾರು 12 ಗಂಟೆಗೆ ಆರಂಭವಾಗಿದ್ದ ಈ ಫೈರಿಂಗ್ ಮಧ್ಯರಾತ್ರಿ 1.30ರವರೆಗೆ ಮುಂದುವರೆದಿತ್ತು. ಈ ವೇಳೆ ಕೆಲ ಯೋಧರಿಗೆ ಗಾಯಗಳಾಗಿದ್ದು, ಓರ್ವ ನಾಗರಿಕನೂ ಸಾವನ್ನಪ್ಪಿದ್ದಾರೆ.
ದಾಳಿ ನಡೆಸಿದ ಬಳಿಕ ಅವಿತುಕೊಂಡಿದ್ದ ಉಗ್ರರು ಪರಾರಿಯಾಗಿದ್ದಾರೆನ್ನಲಾಗಿದೆ. ಸದ್ಯ ಈ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಶೋಧ ಕಾರ್ಯ ಮುಂದುವರೆದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ