ಮಧ್ಯಂತರ ಜಾಮೀನಿಗಾಗಿ ‘ಸುಪ್ರೀಂ’​ ಮೊರೆಹೋದ ಅರ್ನಬ್ ಗೋಸ್ವಾಮಿ!!

ನವದೆಹಲಿ :  

      ರಿಪಬ್ಲಿಕ್‌ ಟಿವಿ ಮುಖ್ಯಸ್ಥ ಅರ್ನಬ್‌ ಗೋಸ್ವಾಮಿ ಅವರು ಮಧ್ಯಂತರ ಜಾಮೀನು ಕೋರಿ ಸುಪ್ರೀಂಕೋರ್ಟ್‌ಗೆ ಮಂಗಳವಾರ ಅರ್ಜಿ ಸಲ್ಲಿಸಿದ್ದಾರೆ. 

      2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್​ ಮತ್ತು ಅವರ ತಾಯಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದರು ಎಂಬ ಆರೋಪ ಅರ್ನಾಬ್​ ಗೋಸ್ವಾಮಿ ಮೇಲಿದೆ. ರಿಪಬ್ಲಿಕ್ ಟಿವಿ ಸ್ಟುಡಿಯೋ ನಿರ್ಮಿಸುವಾಗ ಅನ್ವಯ್ ನಾಯಕ್ ಅವರೇ ಇಂಟೀರಿಯರ್ ಡಿಸೈನಿಂಗ್ ಮಾಡಿಕೊಟ್ಟಿದ್ದರು. ಅದರ ಹಣ ನೀಡದೆ ಸತಾಯಿಸಿದ್ದರಿಂದ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಅರ್ನಬ್ ಗೋಸ್ವಾಮಿ ವಿರುದ್ಧ ಕೇಳಿಬಂದಿತ್ತು.

      ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಕಳೆದವಾರ ಅರೆಸ್ಟ್​ ಆಗಿರುವ ಅರ್ನಬ್ ಗೋಸ್ವಾಮಿಗೆ ಮಧ್ಯಂತರ ಜಾಮೀನು ನೀಡಲು ಬಾಂಬೇ ಹೈಕೋರ್ಟ್​ ನಿರಕಾರಿಸಿತ್ತು. ಇದಾದ ಬೆನ್ನಲ್ಲೇ ಅರ್ನಬ್​ ಜಾಮೀನು ಕೋರಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap