ನವದೆಹಲಿ:
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೆಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನ ರದ್ದುಗೊಳಿಸಲಾಗಿದ್ದು, ದೇಶದ ವಿವಿಧ ಭಾಗಗಳಲ್ಲಿನ ಸುಮಾರು 8 ಸಾವಿರ ಸೈನಿಕರನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ಸ್ಥಳಾಂತರಿಸಲಾಗಿದೆ.
370ನೇ ವಿಧಿಯನ್ನ ರದ್ದುಪಡಿಸಿದ ನಂತರ ಭಾರತೀಯ ಸೇನೆ ಮತ್ತು ಭಾರತೀಯ ವಾಯುಪಡೆಗೆ ಎಚ್ಚರಿಕೆಯಿಂದ ಇರುವಂತೆ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಭಾರತೀಯ ವಾಯುಪಡೆಯ ಸಿ-17 ಸಾರಿಗೆ ವಿಮಾನಗಳ ಮೂಲಕ ಸೈನಿಕರನ್ನು ಶ್ರೀನಗರಕ್ಕೆ ಕರೆತರಲಾಗುತ್ತಿದೆ. ಅಲ್ಲದೆ ಹೆಚ್ಚಿನ ಭದ್ರತೆಗಾಗಿ ಉತ್ತರ ಪ್ರದೇಶ, ಒಡಿಶಾ, ಅಸ್ಸೋಂ ಸೇರಿದಂತೆ ಇತರೆ ರಾಜ್ಯಗಳಲ್ಲಿದ್ದ 8 ಸಾವಿರ ಅರೆಸೇನಾ ಪಡೆಯನ್ನ ಕಾಶ್ಮೀರಕ್ಕೆ ಕಳುಹಿಸಿಕೊಡಲಾಗಿದೆ.
ಕಳೆದ ವಾರದಲ್ಲಿ ಸುಮಾರು 35 ಸಾವಿರ ಸೈನಿಕರನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ಸ್ಥಳಾಂತರಿಸಲಾಗಿತ್ತು. ಇದೀಗ ಹೆಚ್ಚುವರಿಯಾಗಿ 8 ಸಾವಿರ ಸೈನಿಕರನ್ನು ಸ್ಥಳಾಂತರಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ