ಛತ್ತೀಸ್ ಗಢ್ :
ಡೀಸೆಲ್ ಟ್ಯಾಂಕರ್ ಅನ್ನು ನಕ್ಸಲೀಯರು ಸ್ಫೋಟಿಸಿದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಛತ್ತೀಸ್ ಗಢದ ಕಾನ್ಕೇರ್ ಜಿಲ್ಲೆಯಲ್ಲಿ ನಡೆದಿದೆ.
ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು, ಕಂಕರ್ ಜಿಲ್ಲೆಯ ರೌಫಾಟ್ ಪ್ರದೇಶದಲ್ಲಿ ನಿರ್ಮಾಣ ಕಾರ್ಯದಲ್ಲಿ ನಿರತರಾಗಿದ್ದ ಟ್ರಕ್ ಟ್ಯಾಂಕರ್‌ಗಳನ್ನು ಗುರಿಯಾಗಿಸಿಕೊಂಡು ನಕ್ಸಲರು ಈ ದಾಳಿ ನಡೆಸಿದ್ದಾರೆ. ಮಂಗಳವಾರ ಯೋಧರು ಪ್ರದೇಶಕ್ಕೆ ಭೇಟಿ ನೀಡಿದಾಗ ಈ ಘಟನೆ ಬೆಳಕಿಗೆ ಬಂದಿತ್ತು. ಈ ಸಂದರ್ಭದಲ್ಲಿ ಅಡಗಿ ಕುಳಿತಿದ್ದ ನಕ್ಸಲೀಯರ ತಂಡ ಗುಂಡಿನ ದಾಳಿ ನಡೆಸಿತ್ತು. ಅದಕ್ಕೆ ಪ್ರತಿಯಾಗಿ ಯೋಧರು ಪ್ರತಿದಾಳಿ ನಡೆಸಿರುವುದಾಗಿ ತಿಳಿದುಬಂದಿದೆ.
Chhattisgarh: 3 civilians killed in IED blast planted by naxals, in Kanker district, today. pic.twitter.com/qXIL01Yuxt
— ANI (@ANI) September 24, 2019
ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಬಗ್ಗೆ ತಿಳಿಯುತ್ತಿದ್ದಂತೆಯೇ ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಭಾನುಪ್ರತಾಪ್ಪುರ್ ಮತ್ತು ನಾರಾಯಣ್ ಪುರ್ ಸಂಪರ್ಕಿಸುವ ರಸ್ತೆಯನ್ನು ಕೆಲವು ಗಂಟೆಗಳ ಕಾಲ ಬಂದ್ ಮಾಡಿದ್ದು, ಶೋಧಕಾರ್ಯಾಚರಣೆ ಮುಂದುವರಿದಿರುವುದಾಗಿ ವರದಿ ವಿವರಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ