ನವದೆಹಲಿ :
ಸೆಪ್ಟೆಂಬರ್ 30ರ ವರೆಗೆ ಅಂತಾಷ್ಟ್ರೀಯ ವಿಮಾನ ಸಂಚಾರವನ್ನು ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಇಂದು ಅಧಿಸೂಚನೆ ಹೊರಡಿಸಿದೆ.
ಕೊರೋನಾ ನಿಯಂತ್ರಣಕ್ಕಾಗಿ ಮಾರ್ಚ್ 25ರಂದು ಪ್ರಧಾನಿಯವರು ದೇಶದಾದ್ಯಂತ ಲಾಕ್ ಡೌನ್ ಘೋಷಿಸಿದ ನಂತರ ಮಾರ್ಚ್ 23ರಂದು ಅಂತಾಷ್ಟ್ರೀಯ ವಿಮಾನ ಸಂಚಾರ ಸ್ಥಗಿತಗೊಳಿಸಲಾಗಿತ್ತು.
ಆದರೆ, ಕೋವಿಡ್ 19 ಹಾಗೂ ಲಾಕ್ ಡೌನ್ ನಿಟ್ಟಿನಲ್ಲಿ ವಿದೇಶದಲ್ಲಿ ಬಾಕಿ ಉಳಿದಿದ್ದ ಭಾರತೀಯರನ್ನು ಕರೆತರಲು ಮೇ ತಿಂಗಳಿನಿಂದ ವಂದೇ ಭಾರತ್ ಮಿಷನ್ ನಡಿ ವಿಶೇಷ ಅಂತಾರಾಷ್ಟ್ರೀಯ ವಿಮಾನಗಳನ್ನು ಬಿಡುವುದಾಗಿ ವರದಿ ತಿಳಿಸಿದೆ.
5 ತಿಂಗಳಿಂದ ಅಂತರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ವಿಮಾನ ಸೇವೆಯನ್ನು ಸ್ಥಗಿತಗೊಳಿಸಲಾಗಿದ್ದು, ಇದೀಗ ಅದನ್ನು ಸೆಪ್ಟೆಂಬರ್ 30ರ ವರೆಗೆ ವಿಸ್ತರಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ