ಬೆಂಗಳೂರು:
ಎಲೆಕ್ಟ್ರಾನಿಕ್ ಸಿಟಿಯ ಹೊಸೂರು ರಸ್ತೆ ಜಂಕ್ಷನ್ನ ಬಸ್ ನಿಲ್ದಾಣದ ಬಳಿ ವೇಗವಾಗಿ ಬಂದ ಖಾಸಗಿ ಬಸ್ ಹರಿದು ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಮೃತವ್ಯಕ್ತಿಯು ಸುಮಾರು 40 ವರ್ಷ ವಯಸ್ಸಿನವರಾಗಿದ್ದು, ಅವರ ಹೆಸರು, ವಿಳಾಸ ಪತ್ತೆಯಾಗಿಲ್ಲ.ಭಾನುವಾರ ರಾತ್ರಿ 9ರ ವೇಳೆ ಅವರು ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಖಾಸಗಿ ಬಸ್ ಹರಿದು ಈ ದುರ್ಘಟನೆ ಸಂಭವಿದೆ. ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೆÇಲೀಸರು ಪ್ರಕರಣ ದಾಖಲಿಸಿದ್ದಾರೆ.








