ಕಂಪನಿ ಮೇಲಿನ ಪ್ರಕರಣ ಕೈಬಿಡಲು 1 ಕೋಟಿ ಹಣಕ್ಕೆ ಬೇಡಿಕೆಯಿಟ್ಟ ಸಿಸಿಬಿಯ ಸಬ್‍ಇನ್ಸ್‍ಪೆಕ್ಟರ್

ಬೆಂಗಳೂರು:

 ಸಾರ್ವಜನಿಕರಿಗೆ ಕೋಟ್ಯಾಂತರ ರೂಗಳ ವಂಚನೆ ಮಾಡಿದ್ದ ಕಂಪನಿ ಮೇಲಿನ ಪ್ರಕರಣ ಕೈಬಿಡಲು 1 ಕೋಟಿ ಹಣಕ್ಕೆ ಬೇಡಿಕೆಯಿಟ್ಟು 35 ಲಕ್ಷ ಲಂಚ ಪಡೆದಿದ್ದ ಸಿಸಿಬಿಯ ಸಬ್‍ಇನ್ಸ್‍ಪೆಕ್ಟರ್ ಮತ್ತು ಮುಖ್ಯಪೇದೆಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಸಿಸಿಬಿಯ ಸಂಘಟಿತ ಅಪರಾಧ ದಳದ(ಓಸಿಡ್ಲ್ಯೂ)ಸಬ್‍ಇನ್ಸ್‍ಪೆಕ್ಟರ್ ಪ್ರಕಾಶ್,ಮುಖ್ಯಪೇದೆ ಸತೀಶ್ ಅವರು ಲಂಚ ಪಡೆದಿರುವ ವರದಿ ತರಿಸಿಕೊಂಡು ಪರಿಶೀಲನೆ ನಡೆಸಿದ ನಗರ ಪೋಲೀಸ್ ಆಯುಕ್ತ ಸುನೀಲ್ ಕುಮಾರ್ ಅವರು ಇಬ್ಬರನ್ನು ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ.

  ತಿಂಗಳಿಗೆ ಅಧಿಕ ಲಾಭಾಂಶ ನೀಡುವುದಾಗಿ ಸಾರ್ವಜನಿಕರಿಂದ ಸುಮಾರು 65 ಕೋಟಿ ಹೂಡಿಕೆ ಮಾಡಿಸಿಕೊಂಡಿದ್ದ ಜಯನಗರದಲ್ಲಿ ಕಚೇರಿ ಹೊಂದಿದ್ದ ಎಐಎಂಎಂಎಸ್ ಕಂಪನಿ ಸಾವಿರಾರು ಮಂದಿಗೆ ವಂಚನೆ ನಡೆಸಿತ್ತು.
ಕಳೆದ ಡಿಸೆಂಬರ್ 9ರಂದು ಜಯನಗರದಲ್ಲಿರುವ ಎಐಎಂಎಂಎಸ್ ಕಂಪನಿಯಿಂದ ವಂಚನೆ ದೂರು ಬಂದಿತ್ತು. ಇಬ್ಬರು ಅಧಿಕಾರಿಗಳು ಅಂದು ಕಂಪನಿ ಮೇಲೆ ದಾಳಿ ಮಾಡಿದ್ದರು. ಈ ವೇಳೆ ಕಂಪನಿ ಮಾಲೀಕ ಸಹಿತ ಐವರು ಆರೋಪಿಗಳನ್ನು ಬಂಧಿಸಿದ್ದರು. ಬಳಿಕ ಪ್ರಕಾಶ್ ಹಾಗೂ ಸತೀಶ್ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಕರೆದುಕೊಂಡು ಬಂದಿದ್ದರು.

  ಈ ವೇಳೆ ಪ್ರಕರಣವನ್ನು ಮುಚ್ಚಿ ಹಾಕಲು ನಮಗೆ 1 ಕೋಟಿ ರೂ. ನೀಡಬೇಕು ಎಂದು ಬೇಡಿಕೆ ಇಟ್ಟಿದ್ದರು. ಅಲ್ಲದೇ 35 ಲಕ್ಷ ರೂ. ಹಣ ಕೂಡ ಪಡೆದುಕೊಂಡಿರು
ಈ ಆರೋಪಕ್ಕೆ ಸಂಬಂಧಿಸಿದಂತೆ ಸಿಸಿಬಿ ಡಿಸಿಪಿ ಗಿರೀಶ್ ತನಿಖೆ ನಡೆಸಿದ್ದರು. ಈ ವೇಳೆ ಹಣಕ್ಕೆ ಬೇಡಿಕೆಯಿಟ್ಟ ವಿಚಾರ ಬಯಲಾಗಿದ್ದು, ಪೋಲೀಸ್ ಕಮಿಷನರ್‍ಗೆ ವರದಿ ಕೂಡ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಇಬ್ಬರು ಅಧಿಕಾರಿಗಳನ್ನು ಕೆಲಸದಿಂದ ಅಮಾನತು ಮಾಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link