ಮುಂಬೈ:
ಭಾರತ ತಂಡದ ಯಶಸ್ವಿ ನಾಯಕರಲ್ಲಿ ಒಬ್ಬರಾದ ಸೌರವ್ ಗಂಗೂಲಿ, ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ 39ನೇ ಅಧ್ಯಕ್ಷರಾಗಿ ಬುಧವಾರ ಅಧಿಕಾರ ವಹಿಸಿಕೊಂಡರು.
ಈ ತಿಂಗಳಾರಂಭದಲ್ಲಿ ಬಿಸಿಸಿಐ ಸಭೆಯಲ್ಲಿ ಅಧ್ಯಕ್ಷ ಹುದ್ದೆಗೆ ಗಂಗುಲಿ ಮಾತ್ರ ನಾಮಪತ್ರ ಸಲ್ಲಿಸಿದ್ದರು.ಹೀಗಾಗಿ ಅವರನ್ನು ಅಧ್ಯಕ್ಷೀಯ ಅಭ್ಯರ್ಥಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
It's official – @SGanguly99 formally elected as the President of BCCI pic.twitter.com/Ln1VkCTyIW
— BCCI (@BCCI) October 23, 2019
ಇನ್ನು ಬಿಸಿಸಿಐ ಹೊಸ ಆಡಳಿತದಲ್ಲಿ ಗೃಹ ಸಚಿವ ಅಮಿತ್ ಶಾ ಪುತ್ರ ಜಯ ಶಾ ಮಂಡಳಿಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಮಾಜಿ ಅಧ್ಯಕ್ಷ,ಕೇಂದ್ರ ಸಚಿವ ಅನುರಾಗ್ ಠಾಕೂರ್ ಸಹೋದರ ಅರುಣ್ ಸಿಂಗ್ ಧುಮಾಲ್ ನೂತನ ಖಜಾಂಚಿಯಾಗಿಯೂ, ಕೇರಳದ ಹಿರಿಯ ಆಡಳಿತಾಧಿಕಾರಿ ಜಯೇಶ್ ಜಾರ್ಜ್ ಜೊತೆ ಕಾರ್ಯದರ್ಶಿಯಾಗಿಯೂ ಹಾಗೂ ಉತ್ತರಾಖಂಡದ ಮಹಿಮ್ ವರ್ಮಾ ನೂತನ ಉಪಾಧ್ಯಕ್ಷರಾಗಿಯೂ ಆಯ್ಕೆಯಾಗಿದ್ದಾರೆ.
ಗಂಗೂಲಿ ನೇಮಕದೊಂದಿಗೆ ವಿನೋದ್ ರಾಯ್ ನೇತೃತ್ವದ ಆಡಳಿತಾಧಿಕಾರಿ ಸಮಿತಿ(ಸಿಒಎ)ಯ ದೀರ್ಘ ಪಯಣ ಅಂತ್ಯವಾದಂತಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ