ಕೊಲ್ಕತ್ತಾ :
ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಹಾಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರನ್ನು ಕೋಲ್ಕತ್ತಾದ ವುಡ್ ಲ್ಯಾಂಡ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಗಂಗೂಲಿ ಅವರಿಗೆ ಲಘು ಹೃದಯಾಘಾತವಾಗಿದೆ ಎಂದು ಆಸ್ಪತ್ರೆ ವೈದ್ಯರು ದೃಢಪಡಿಸಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ. ಆದರೆ, ಸಂಜೆ ವೇಳೆಗೆ ಆಯಂಜಿಯೋಪ್ಲಾಸ್ಟಿ ಚಿಕಿತ್ಸೆ ನೀಡುವ ಅಗತ್ಯವಿದೆ ಎಂದು ಮೂಲಗಳಿಂದ ತಿಳಿದು ಬಂದಿರುವುದಾಗಿ ವರದಿಯಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ