ಕೋಲ್ಕತ್ತಾ :
ಇತ್ತೀಚೆಗಷ್ಟೇ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಡಿಸ್ಚಾರ್ಜ್ ಆಗಿದ್ದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪ್ರಸ್ತುತ ಅವರನ್ನು ಐಸಿಯುನಲ್ಲಿ ಇರಿಸಲಾಗಿದ್ದು, ಮಧ್ಯಾಹ್ನ ಸುಮಾರು 2.45ರಲ್ಲಿ ಸೌರವ್ ಗಂಗೂಲಿ ಅವರನ್ನು ಗ್ರೀನ್ ಕಾರಿಡಾರ್ ಮೂಲಕ ಅಪೋಲೊ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ವೇಳೆ ಗಂಗೂಲಿ ಆಗಮನಕ್ಕಾಗಿ ವೈದ್ಯರ ತಂಡ ಕಾಯುತ್ತಿತ್ತು. ಆಸ್ಪತ್ರೆಗೆ ಬಂದ ಗಂಗೂಲಿ ಸ್ಟ್ರಚ್ಚರ್ ನಿರಾಕರಿಸಿ, ಆಸ್ಪತ್ರೆ ಒಳಗೆ ಅವರೇ ನಡೆದುಕೊಂಡು ಹೋದರು.
ಸೌರವ್ ಗಂಗೂಲಿಗೆ ಜಿಮ್ ಮಾಡುವ ಸಂದರ್ಭದಲ್ಲಿ ಇತ್ತೀಚೆಗಷ್ಟೇ ಲಘು ಹೃದಯಾಘಾತವಾಗಿತ್ತು. ಸೂಕ್ತ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ವಾಪಸ್ ಆಗಿದ್ದ ಗಂಗೂಲಿ ಅವರಿಗೆ ಇದೀಗ ಮತ್ತೆ ಎದೆನೋವು ಕಾಣಿಸಿಕೊಂಡಿದೆ. ಹೀಗಾಗಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ