ಬೆಳಗಾವಿ:
ಮಾಜಿ ಸಚಿವ ಸತೀಶ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರು ತಮ್ಮ ವೈಯಕ್ತಿಕ ಪ್ರತಿಷ್ಠೆಯನ್ನು ಒದಿಗಿಟ್ಟು ಒಂದಾದ ಪರಿಣಾಮ ಬೆಳಗಾವಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತದ ಚುಕ್ಕಾಣಿ ಕಾಂಗ್ರೆಸ್ ಪಾಲಾಗಿದೆ.
ಪಕ್ಷದ ಹಿತದೃಷ್ಟಿಯಿಂದ, ಚುನಾವಣೆ ನಡೆಸದೇ ಅಧ್ಯಕ್ಷ, ಉಪಾಧ್ಯಕ್ಷರನ್ನ ಆಯ್ಕೆ ಮಾಡ್ತೀವಿ ಅಂತ ಹೇಳುತ್ತಿದ್ದ ನಾಯಕರು ಕೊನೆಗೂ ಮಾತುಕತೆ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಂಡಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಬೆಳಗಾವಿ ಪಿ.ಎಲ್.ಡಿ ಬ್ಯಾಂಕ್ ಚುನಾವಣೆಯಲ್ಲಿ ಹಾವು-ಮುಂಗುಸಿಯಂತೆ ಪರಸ್ಪರ ಕಿತ್ತಾಡಿಕೊಂಡಿದ್ದ ಜಾರಕಿಹೊಳಿ ಸಹೋದರರು ಹಾಗೂ ಲಕ್ಷ್ಮೀ ಹೆಬ್ಬಾಳಕರ್ ನಡುವಿನ ಗುದ್ದಾಟ ಸ್ವಲ್ಪ ಮಟ್ಟಿಗೆ ತಣ್ಣಗಾಗಿತ್ತು.
ಸೋಮವಾರ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಹಿನ್ನೆಲೆಯಲ್ಲಿ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸದಸ್ಯರ ಜೊತೆಗೂಡಿ ಮಾತುಕತೆ ನಡೆಸಿದ ಶಾಸಕ ಸತೀಶ್ ಜಾರಕಿಹೊಳಿ ಹಾಗೂ ಶಾಸಕಿ ಹೆಬ್ಬಾಳಕರ್ ಬೆಳಗಾವಿ ಎಪಿಎಂಸಿ ಅಧ್ಯಕ್ಷ, ಉಪಾಧ್ಯಕ್ಷರನ್ನ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2018/10/satish.gif)