ಯುವಕರು ದೇಶದ ಸಂಸ್ಕೃತಿ ಮತ್ತು ಅಭಿವೃದ್ಧಿಗಾಗಿ ಶ್ರಮಿಸಬೇಕು: ಬಿ.ಸಿ.ಬಿರಾದರ್

ಬಳ್ಳಾರಿ :

  ಯುವಕರು ಪ್ರಾಮಾಣಿಕತೆ ಹಾಗೂ ಶ್ರಮದಾನದಿಂದಾಗಿ ದುಡಿದಾರೆ ಮಾತ್ರ ದೇಶದ ಸಂಸ್ಕೃತಿ  ಹಾಗೂ ಅಭಿವೃದ್ಧಿ ಹೊಂದಲು ಸಾಧ್ಯವೆಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಸಿ ಬಿರಾದರ್ ಹೇಳಿದರು.

  ನಗರದ ಬಿಡಿಎಎ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಿ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಶನಿವಾರರಂದು ನಡೆದ ದಿವ್ಯಚೇತನ ಸ್ವಾಮಿ ವಿವೇಕಾನಂದ ಜನ್ಮದಿನಾಚರಣೆ ಹಾಗೂ ರಾಷ್ಟ್ರೀಯ ಯುವದಿನ, ಸಪ್ತಾಹ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

   ಪ್ರಮಾಣಿಕತೆ ಹಾಗೂ ಶ್ರಮದಾನದ ಮೂಲಕ ಸ್ವಾಮಿ ವಿವೇಕಾನಂದರು ಸಣ್ಣ ವಯಸ್ಸಿನಲ್ಲಿಯೇ ದೊಡ್ಡ ಸಾಧನೆ ಮಾಡಿ ಜಗತ್ತಿಗೆ ಮಾದರಿ ವ್ಯಕ್ತಿಯಾಗಿ ಹೊರಹೊಮ್ಮಿದವರು. ಇಂದಿನ ಯುವಕರು ಕೂಡ ಶ್ರಮದಾನದ ಮೂಲಕ ದೇಶದ ಪ್ರಗತಿಗೆ ನಾಂದಿನಾಡಬೇಕಾಗಿದೆ ಎಂದು ಅವರು ಹೇಳಿದರು.

   ಭಾರತದಲ್ಲಿ ಶೇ.40ರಷ್ಟು ಯುವಕರಿದ್ದಾರೆ ಹಾಗೂ ಸಾಕಷ್ಟು ಸಂಪನ್ಮೂಲ ಹೊಂದಿರುವ ಭಾರತ ದೇಶ ಅದನ್ನ ಸದ್ಬಳಕೆ ಮಾಡಿಕೊಳ್ಳಲು ಯುವಕರು ಮುಂದೆ ಬರಬೇಕಿದೆ. ಧೃಢ ಮನಸ್ಸು ಮಾಡಿ ಮುನ್ನೆಡೆದರೆ ದೇಶದ ಅಭಿವೃದ್ಧಿಗೆ ಸಧೃಡವಾದ ಬುನಾದಿ ಬೀಳುತ್ತದೆ ಎಂದರು.

   ಹಿರಿಯ ಸಿವಿಲ್ ನ್ಯಾಯಾದೀಶ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಹಂದ್ರಾಳ್ ಅವರು ಮಾತನಾಡಿ, ಆಧುನಿಕ ಯುಗದಲ್ಲಿ ಯುವಕರು ಮಾಧಕ ವಸ್ತುಗಳಿಗೆ ದಾಸರಾಗದೇ ತಮ್ಮ ಜವಾಬ್ದಾರಿಯಗಳನ್ನು ಮರೆಯುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು. ಉತ್ತಮ ಶಿಕ್ಷಣ ಪಡೆದು ಮಹಾನ್ ವ್ಯಕ್ತಿಯಾದ ಸ್ವಾಮಿ ವಿವೇಕಾನಂದರ ಆಶಯದಂತೆ ಭಾರತವನ್ನು ಸಧೃಡ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.

   ಅಪರ ಜಿಲ್ಲಾಧಿಕಾರಿ ಸತೀಶ್ ಕುಮಾರ್ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಕೆ.ರಹಮತುಲ್ಲಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀಮತಿ ಸರಳದೇವಿ ಸತೀಶ್ಚಂದ್ರ ಆಗರ್ ವಾಲ್ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಅಬ್ದುಲ್ ಮುತಾಲಬ್ ಸೇರಿದಂತೆ ಇತರೆ ಅಧಿಕಾರಿಗಳು, ವಿದ್ಯಾರ್ಥಿಗಳು ಇದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap